7:40 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ತೇಜಸ್ವಿ 88ನೇ ಹುಟ್ಟುಹಬ್ಬ | ಚಿಕ್ಕಮಗಳೂರಿನಲ್ಲಿ ಸೆಪ್ಟೆಂಬರ್‌ 6ಕ್ಕೆ ಪ್ರಾಜೆಕ್ಟ್ ಪಂಚತಂತ್ರ ನಾಟಕ ಪ್ರದರ್ಶನ

05/09/2026, 19:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ 88ನೇ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 6ರಂದು ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಪ್ರಾಜೆಕ್ಟ್ ಪಂಚತಂತ್ರ ನಾಟಕ ಪ್ರದರ್ಶನ ಮತ್ತು ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ.
ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ಕಾರ್ಯಕ್ರಮ‌ ನಡೆಯಲಿದ್ದು ಅಂದು ಸಂಜೆ 5-30 ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ತೇಜಸ್ವಿ ಅವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಕರ್ವಾಲೊ ಕೃತಿ ಆಧಾರಿತ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಮತ್ತು ಪ್ರಾಜೆಕ್ಟ್ ಪಂಚತಂತ್ರ ನಾಟಕ ಪ್ರದರ್ಶನ ನಡೆಯಲಿದೆ. ನಾಟಕವನ್ನು ನಿರ್ದಿಗಂತ ತಂಡ ಪ್ರಸ್ತುತ ಪಡಿಸುತ್ತಿದ್ದು ಅರುಣ್‌ಲಾಲ್ ಅವರು ನಿರ್ದೇಶಿಸಿದ್ದಾರೆ. ಪಂಚತಂತ್ರದ ಪುರಾತನ ಕಥೆಗಳು ಇಂದಿನ ಬದುಕಿನೊಂದಿಗೆ ಸಂವಾದಿಸುವ ವಿಶಿಷ್ಟ ರಂಗಪ್ರಯೋಗ ಇದಾಗಿದೆ. 15 ಕ್ಕೂ ಹೆಚ್ಚು ಕಥೆಗಳು ದೃಶ್ಯಕಾವ್ಯದ ಮೂಲಕ ಹೊಸ ರೂಪ ಪಡೆಯುತ್ತವೆ. ನಾಟಕಕ್ಕೆ ಪ್ರವೇಶ ಉಚಿತವಾಗಿದ್ದು ಹೆಚ್ಚಿನ ಮಾಹಿತಿಗೆ 966398873 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು