12:24 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ತೆಲಂಗಾಣದಿಂದ ಪ್ರವಾಸ ಬಂದಿದ್ದ ವ್ಯಕ್ತಿ ಬ್ರಹ್ಮಾವರ ಲಾಡ್ಜ್ ನಲ್ಲಿ ಹೃದಯಾಘಾತದಿಂದ ಸಾವು

30/10/2022, 11:56

ಬ್ರಹ್ಮಾವರ(reporterkarnataka.com): ಲಾಡ್ಜ್ ನಲ್ಲಿ‌ ತಂಗಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬ್ರಹ್ಮಾವರ ಮದರ್‌ ಪ್ಯಾಲೇಸ್‌ ನಲ್ಲಿ ಇಂದು ಮುಂಜಾನೆ 3ಗಂಟೆಗೆ ನಡೆದಿದೆ.

ತೆಲಂಗಾಣ ರಾಜ್ಯದ ಸಿದ್ದಿಪೇಟ ಜಿಲ್ಲೆಯ‌ ಸಿದ್ದಿಪೇಟ ನಿವಾಸಿ ವಿ. ಶ್ರೀನಿವಾಸ(61) ಮೃತದುರ್ದೈವಿ. ಇವರು ಅ.26ರಂದು ಮಗ ಮೋಹನ ಕುಮಾರ್, ಪತ್ನಿ, ಮಗನ ಹೆಂಡತಿ, ಮಗುವಿನೊಂದಿಗೆ ಉಡುಪಿ ಜಿಲ್ಲೆ ಪ್ರವಾಸಕ್ಕೆ ಬಂದಿದ್ದರು. ಅ. 27ರಂದು ಕೊಲ್ಲೂರು ದೇವರ ದರ್ಶನ ಮುಗಿಸಿಕೊಂಡು, ವಿಶ್ರಾಂತಿ ಪಡೆಯಲು ಬ್ರಹ್ಮಾವರ ಮದರ್‌ ಪ್ಯಾಲೇಸ್‌ ಗೆ ಬಂದು ತಂಗಿದ್ದರು. ಇಂದು ಬೆಳಗ್ಗಿನ ಜಾವ 3:10ಕ್ಕೆ ವಿ.ಶ್ರೀನಿವಾಸ ಅವರಿಗೆ ಜ್ವರ ಹಾಗೂ ಉಸಿರಾಟದ ತೊಂದರೆವುಂಟಾಗಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಬ್ರಹ್ಮಾವರ ಮಹೇಶ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈಧ್ಯರು ಶ್ರೀನಿವಾಸ ರವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ಧಾರೆ.

ಶ್ರೀನಿವಾಸ್ ಅವರು ಲಿವರ್‌ ಸಮಸ್ಯೆಯಿಂದ ಬಳಲುತ್ತಿದ್ದು, ಅದೇ ಕಾರಣದಿಂದ ಅಥವಾ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು