ಇತ್ತೀಚಿನ ಸುದ್ದಿ
ತೆಲಸಂಗ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ: ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪ್ರಗತಿ ಪರಿಶೀಲನೆ
28/12/2023, 12:45
ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ
info.reporterkarnataka@gmail.com
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಸಮೀಪದ ರಾಷ್ಟ್ರೀಯ ಹೆದ್ದಾರಿ 548ಬಿ ರಸ್ತೆ ಕಾಮಗಾರಿಯ ಪರಿಶೀಲನೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಡೆಸಿದರು.
ಸ್ಥಳಕ್ಕೆ ಭೇಟಿ ಕೊಟ್ಟ ಸಚಿವರು ರಸ್ತೆ ಕಾಮಗಾರಿಯ ಪ್ರಗತಿ ಮತ್ತು ಗುಣಮಟ್ಟದ ಪರಿಶೀಲನೆ ನಡೆಸಿದರು. ಸಚಿವರ ಜತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.