ಇತ್ತೀಚಿನ ಸುದ್ದಿ
ನೋಂದಣಿ ಪತ್ರ ಸಿದ್ಧವಾಗಿಡಲು ಹೇಳಿ: ಆರೆಸ್ಸೆಸ್ ಕುರಿತು ಬಿಜೆಪಿಗೆ ಗೃಹ ಪ್ರಿಯಾಂಕ್ ಖರ್ಗೆ ಟಾಂಗ್
09/06/2026, 19:05
ಬೆಂಗಳೂರು(reporterkarnataka.com): ತಮಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ‘ರಾಜಕೀಯ ಪಕ್ಷ’ಕ್ಕೆ ನೋಂದಣಿ ಪತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ತಿಳಿಸಿ ಎಂದು ಅವರು ಬಿಜೆಪಿಗೆ ವ್ಯಂಗ್ಯವಾಡಿದ್ದಾರೆ. ಫೇಸ್ಬುಕ್ನಲ್ಲಿ ತಮಗೆ ಕೊಲೆ ಬೆದರಿಕೆ ಒಡ್ಡಿದ್ದ ಸುಧೀರ್ ಬಂಗೇರ ಎಂಬಾತನನ್ನು ಕಾರ್ಕಳ ಪೊಲೀಸರು ಬಂಧಿಸಿದ ಬೆನ್ನಲ್ಲೇ ಗೃಹ ಸಚಿವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ನನ್ನನ್ನು ಗುರಿಯಾಗಿಸಲು ಮತ್ತು ಹೆದರಿಸಲು ಬಿಜೆಪಿ ಸಂಘಟನೆಯ ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ‘ಆರ್ಎಸ್ಎಸ್ ಇನ್ನು ಮುಂದಾದರೂ ಅಧಿಕೃತವಾಗಿ ನೋಂದಣಿ ಮಾಡಿಕೊಳ್ಳಲು ಸಿದ್ಧತೆ ನಡೆಸಬೇಕು’ ಎಂದು ಸಲಹೆ ನೀಡಿದ್ದಾರೆ.












