11:18 AM Sunday3 - August 2025
ಬ್ರೇಕಿಂಗ್ ನ್ಯೂಸ್
SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ…

ಇತ್ತೀಚಿನ ಸುದ್ದಿ

ಬೆಳಗಾವಿ, ಕಲಬುರಗಿಯಲ್ಲಿ ತಾಪಮಾನ ಹೆಚ್ಚಳ; ನರೇಗಾ ಕಾರ್ಮಿಕರಿಗೆ ಶೇ.30 ಕೆಲಸದ ಪ್ರಮಾಣ ಕಡಿತ: ಸಚಿವ ಪ್ರಿಯಾಂಕ್ ಖರ್ಗೆ

05/04/2025, 00:17

ಬೆಂಗಳೂರು(reporterkarnataka.com): ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕರಿಗೆ ಎಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಶೇ.30 ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬೇಸಿಗೆ ದಿನಗಳಲ್ಲಿ ಕೂಲಿ ಕಾರ್ಮಿಕರು ಶಾಖಾಘಾತದಿಂದ, ತಮ್ಮ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಪ್ಪಿಸಲು ಬಿಳಿಯ ಬಣ್ಣದ ಸಡಿಲವಾದ ಖಾದಿ ಬಟ್ಟೆಗಳನ್ನು ಹಾಗೂ ತಲೆಯ ಮೇಲೆ ಬಿಳಿ ಬಣ್ಣದ ರುಮಾಲು ಧರಿಸಿ ಕೆಲಸ ಮಾಡಬೇಕು, ಚಹಾ, ಕಾಫಿ , ತಂಪಾದ ಪಾನೀಯಗಳು, ಮಸಾಲೆ ಮತ್ತು ಎಣ್ಣೆಭರಿತ ಆಹಾರದ ಬದಲಾಗಿ ಹೆಚ್ಚು ತೇವಾಂಶವುಳ್ಳ ತರಕಾರಿ, ಅಂಬಲಿ, ಮಜ್ಜಿಗೆ, ಎಳೆನೀರು ಸೇವನೆ ಮಾಡಬೇಕು ಹಾಗೂ ನೀರನ್ನು ಯಥೇಚ್ಛವಾಗಿ ಕುಡಿಯಬೇಕು ಎಂದು ಸಚಿವರು ಸಲಹೆ ಮಾಡಿದ್ದಾರೆ.
ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿ ಸ್ಥಳಗಳಲ್ಲಿ ಯೋಜನೆಯ ಮಾರ್ಗಸೂಚಿಯಂತೆ ಕಡ್ಡಾಯವಾಗಿ ನೆರಳು, ಶುದ್ಧ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸಲು ಸಚಿವರು ನಿರ್ದೇಶನ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು