1:33 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಬೆಳಗಾವಿ, ಕಲಬುರಗಿಯಲ್ಲಿ ತಾಪಮಾನ ಹೆಚ್ಚಳ; ನರೇಗಾ ಕಾರ್ಮಿಕರಿಗೆ ಶೇ.30 ಕೆಲಸದ ಪ್ರಮಾಣ ಕಡಿತ: ಸಚಿವ ಪ್ರಿಯಾಂಕ್ ಖರ್ಗೆ

05/04/2025, 00:17

ಬೆಂಗಳೂರು(reporterkarnataka.com): ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕರಿಗೆ ಎಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಶೇ.30 ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬೇಸಿಗೆ ದಿನಗಳಲ್ಲಿ ಕೂಲಿ ಕಾರ್ಮಿಕರು ಶಾಖಾಘಾತದಿಂದ, ತಮ್ಮ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಪ್ಪಿಸಲು ಬಿಳಿಯ ಬಣ್ಣದ ಸಡಿಲವಾದ ಖಾದಿ ಬಟ್ಟೆಗಳನ್ನು ಹಾಗೂ ತಲೆಯ ಮೇಲೆ ಬಿಳಿ ಬಣ್ಣದ ರುಮಾಲು ಧರಿಸಿ ಕೆಲಸ ಮಾಡಬೇಕು, ಚಹಾ, ಕಾಫಿ , ತಂಪಾದ ಪಾನೀಯಗಳು, ಮಸಾಲೆ ಮತ್ತು ಎಣ್ಣೆಭರಿತ ಆಹಾರದ ಬದಲಾಗಿ ಹೆಚ್ಚು ತೇವಾಂಶವುಳ್ಳ ತರಕಾರಿ, ಅಂಬಲಿ, ಮಜ್ಜಿಗೆ, ಎಳೆನೀರು ಸೇವನೆ ಮಾಡಬೇಕು ಹಾಗೂ ನೀರನ್ನು ಯಥೇಚ್ಛವಾಗಿ ಕುಡಿಯಬೇಕು ಎಂದು ಸಚಿವರು ಸಲಹೆ ಮಾಡಿದ್ದಾರೆ.
ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿ ಸ್ಥಳಗಳಲ್ಲಿ ಯೋಜನೆಯ ಮಾರ್ಗಸೂಚಿಯಂತೆ ಕಡ್ಡಾಯವಾಗಿ ನೆರಳು, ಶುದ್ಧ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸಲು ಸಚಿವರು ನಿರ್ದೇಶನ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು