12:46 PM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಜಮೀನು ವಿವಾದ: ದೇಗುಲದ ಕಟ್ಟೆಯಲ್ಲಿ ಮಲಗಿದ್ದ ವ್ಯಕ್ತಿಯ ಅಮಾನುಷ ಹತ್ಯೆ; ಸಿಸಿ ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

04/09/2024, 16:36

ಸಾಂದರ್ಭಿಕ ಚಿತ್ರ
ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ದೇವಸ್ಥಾನ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ
ಗೋಕಾಕ್​ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಇಂದು ನಡೆದಿದೆ.
ಜಮೀನಿನ ಗಡಿ ವ್ಯಾಜ್ಯದ ಹಿನ್ನೆಲೆಯಲ್ಲಿ ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ಎಂಬವರನ್ನು ಕೊಲೆ ಮಾಡಲಾಗಿದೆ. ಭೀರಪ್ಪ ಸಿದ್ದಪ್ಪ ಸುಣಧೋಳಿ ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಮಡ್ಡೆಪ್ಪ ಯಲ್ಲಪ್ಪ ಬಾನಸಿ ಅವರು ಮಮದಾಪುರ ಗ್ರಾಮದ ಭೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದಾಗಲೆ ಮಾರಕಾಸ್ತ್ರದಿಂದ ಕೊಚ್ಚಿ ಅವರನ್ನು ಕೊಲೆ ಮಾಡಲಾಗಿದೆ. ದೇವಸ್ಥಾನದ ಆವರಣದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಭಯಾನಕ ಕೊಲೆ ದೃಶ್ಯ ಸೆರೆಯಾಗಿದೆ.
ಜಮೀನಿನ ಗಡಿಗೆ ಸಂಬಂಧಿಸಿದಂತೆ ಮಡೆಪ್ಪ ಮತ್ತು ಭೀರಪ್ಪ ಅವರ ನಡುವೆ
ಹಲವು ವರ್ಷಗಳಿಂದ ವಿವಾದ ಇತ್ತು. ಜಮೀನಿನ ಸೀಮೆಗೆ ಕಲ್ಲು ಇರಿಸಿದ್ದನ್ನು ಮಡ್ಡೆಪ್ಪ ತೆರವುಗೊಳಿಸಿದ್ದ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಭೀರಪ್ಪನಿಗೆ ಮಡ್ಡೆಪ್ಪ ಬೆದರಿಕೆ ಹಾಕಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಆರೋಪಿ ಭೀರಪ್ಪನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು