1:20 PM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಉದ್ವಿಗ್ನ ಸ್ಥಿತಿ: ಉಭಯ ರಾಜ್ಯಗಳ ಬಸ್ ಸಂಚಾರ ರದ್ದು; ಪ್ರಯಾಣಿಕರ ಪರದಾಟ

23/02/2025, 23:04

ಬೆಳಗಾವಿ(reporterkarnataka.com): ಕೆಎಸ್ಸಾರ್ಟಿಸಿ‌ ಬಸ್ ಕಂಡೆಕ್ಟರ್ ಮೇಲೆ ಹಲ್ಲೆ ನಡೆದ ಘಟನೆ ಬೆನ್ನಲ್ಲೇ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಪ್ರಯಾಣಿಕರು ಪರದಾಡುವಂತಾಗಿದೆ.
ಬೆಳಗಾವಿ ಭಾಗದಲ್ಲಿ ಕರವೇ, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಪ್ರತಿಭಟನೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಕೊಲ್ಲಾಪುರಕ್ಕೆ ತೆರಳುವ ಎಲ್ಲ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರವನ್ನು ರದ್ದುಗೊಳಿಸಲಾಗಿದೆ.
ನಿಪ್ಪಾಣಿ,ಚಿಕ್ಕೋಡಿ,ಬೆಳಗಾವಿ ಮಾರ್ಗವಾಗಿ ತೆರಳುವ ಬಸ್ ಗಳ ಸಂಚಾರ ರದ್ದುಗೊಂಡಿದೆ.
ಈ ಮಾರ್ಗವಾಗಿ ಪ್ರತಿದಿನ ದುಮಾರು 100ಕ್ಕೂ ಅಧಿಕ ಬಸ್ ಗಳು ಸಂಚಾರಿಸುತ್ತಿದ್ದವು.ಮಹಾರಾಷ್ಟ್ರದಿಂದಲೂ ಯಾವುದೇ ಬಸ್ ಗಳು ಕರ್ನಾಟಕದ ಕಡೆ ಬರುತ್ತಿಲ್ಲ.ಬಸ್ ಸಂಚಾರವನ್ನು ಮಹಾ ಸರ್ಕಾರ ಬಂದ್ ಮಾಡಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು