11:44 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದಿಂದ ಜನಸಾಮಾನ್ಯರಿಗೆ ತೆರಿಗೆ, ಬೆಲೆ ಏರಿಕೆಯ ಬರೆ: ಶಾಸಕ ಡಾ.ಭರತ್ ಶೆಟ್ಟಿ ವೈ ಕಿಡಿ

06/12/2024, 01:23

ಸುರತ್ಕಲ್(reporterkarnataka.com): ರಾಜ್ಯದಲ್ಲಿ ಕಳೆದ ಐದಾರು ತಿಂಗಳಿನಿಂದ
ಪರಿಸರ ಸಹ್ಯ ಸಿಎನ್‌ಜಿ ದರ ಬರೋಬ್ಬರಿ ಕೆ.ಜಿಗೆ 4.50 ದರ ಏರಿಸಿದರೆ, ಇದೀಗ ಜನಸಾಮಾನ್ಯರು ಬಳಸುವ ವಿದ್ಯುತ್ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಕಾಂಗ್ರೆಸ್ ಆಡಳಿತದ ಸರಕಾರ ಬೆಲೆ ಏರಿಕೆಯ ಶಾಕ್ ನೀಡುತ್ತಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಆರ್ಥಿಕ ಇಕ್ಕಟ್ಟಿನಲ್ಲಿ ಸಿಲುಕಿ ಚಡಪಡಿಸುತ್ತಿದೆ. ಅರ್ಥಿಕ ಕ್ರೋಢಿಕರಣಕ್ಕೆ ಜನರಿಗೆ ತಿಳಿಯದಂತೆ ದಿನಸಿ ವಸ್ತುಗಳ ಮೇಲೆ ತೆರಿಗೆ ಹೊರ ಹಾಕಿದರೆ, ಇದೀಗ ವಿದ್ಯುತ್ ಕ್ಷೇತ್ರಕ್ಕೆ ಕೈ ಹಾಕಿದೆ.ದರ ಏರಿಕೆಯಾದಲ್ಲಿ ಪ್ರತೀಯೊಂದು ವಸ್ತುವಿಗೂ ಮತ್ತೆ ಏರಿಕೆ ಆಗುವುದರಲ್ಲಿ ಸಂಶಯವಿಲ್ಲ.
ಜನರ ಮೇಲೆ ತೆರಿಗೆ, ಬೆಲೆ ಏರಿಕೆ ಮಾಡಿದರೂ ಯಾವುದೇ ಶಾಸಕನಿಗೂ ತನ್ನ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಮಾತ್ರ ನೀಡುತ್ತಿಲ್ಲ. ಮತದಾರರಿಗೆ ಶಾಸಕರು ಮುಖ ತೋರಿಸದಂತಹ ಸ್ಥಿತಿಯನ್ನು ಸರಕಾರ ತಂದೊಡ್ಡಿದೆ. ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ 2 ಸಾವಿರ ಕೋಟಿ ರೂ. ಹೆಚ್ಚು ಅನುದಾನ ತಂದು ಅಭಿವೃದ್ಧಿ ಕಾರ್ಯ ಮಾಡಿದ್ದರೆ ಈ ಬಾರಿ ಕನಿಷ್ಠ 1 ಕೋಟಿ ರೂ. ಬಿಡುಗಡೆಯಾಗಲೂ ಹೆಣಗಾಡುತ್ತಿದ್ದೇವೆ, ಹಾಗಾದರೆ ಬೆಲೆ ಎರಿಕೆಯಿಂದ ಬಂದ ಆದಾಯದ ಮೂಲ ಎಲ್ಲಿಗೆ ಸೋರಿಕೆಯಾಗುತ್ತಿದೆ ಎಂಬುದನ್ನು ಸರಕಾರ ಶ್ವೇತಪತ್ರದ ಹೊರಡಿಸಿ ಜನತೆಗೆ ಮಾಹಿತಿ ನೀಡಬೇಕು ಎಂದು ಶಾಸಕ ಡಾ.ಭರತ್‌ ಶೆಟ್ಟಿ ವೈ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು