ಇತ್ತೀಚಿನ ಸುದ್ದಿ
ತೆರಿಗೆ ವಂಚನೆ, ದೇಶದ ಗೌಪ್ಯ ಮಾಹಿತಿ ಸೋರಿಕೆ: ಚೀನಾದ ಕಂಪನಿಗಳ ಮೇಲೆ ಇಡಿ ದಾಳಿ
06/07/2022, 12:11
ಹೊಸದಿಲ್ಲಿ(reporterkarnataka.com): ತೆರಿಗೆ ವಂಚನೆ ತನಿಖೆಯ ಭಾಗವಾಗಿ ದೇಶದಲ್ಲಿನ ಚೀನಾದ ಟೆಲಿಕಾಂ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಬೆನ್ನೆಲ್ಲೇ ಇದೀಗ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.
ತೆರಿಗೆ ವಂಚನೆ ಮತ್ತು ದೇಶದ ಗೌಪ್ಯ ವಿಚಾರಗಳನ್ನು ಸೋರಿಕೆ ಮಾಡುತ್ತಿರುವ ಆರೋಪದ ಮೇಲೆ ಚೀನಾಗೆ ಸಂಬಂಧಿಸಿದ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉತ್ತರಪ್ರದೇಶ, ಮಧ್ಯಪ್ರದೇಶ, ಬಿಹಾರ ಸೇರಿದಂತೆ ದಕ್ಷಿಣದ ಹಲವು ರಾಜ್ಯಗಳಲ್ಲಿನ ಚೀನಾ ಕಂಪನಿಗಳ ಮೇಲೆ ರೈಡ್ ನಡೆಸಿ ಪರಿಶೀಲನೆಗೆ ಒಳಪಡಿಸಲಾಗಿದೆ.
ಕೋಟ್ಯಂತರ ರೂಪಾಯಿ ವಹಿವಾಟು ನಡೆಸುತ್ತಿರುವ ಚೀನಾ ಮೂಲದ ಟೆಲಿಕಾಂ ಕಂಪನಿಗಳ ಆದಾಯ ವಿವರ ಸಲ್ಲಿಕೆಯಲ್ಲಿ ಲೋಪದೋಷಗಳು ಕಂಡು ಬಂದಿರುವ ಆರೋಪದ ಮೇಲೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ಬಿಸಿ ಮುಟ್ಟಿಸಿದೆ.
ಕಳೆದ ಕೆಲ ವರ್ಷಗಳಿಂದ ಚೀನಿ ಮೂಲದ ಮೊಬೈಲ್ ಕಂಪನಿಗಳು ಸಾವಿರಾರು ಕೋಟಿ ರೂಪಾಯಿ ಆದಾಯ ಗಳಿಸುತ್ತಿದ್ದರೂ, ನಷ್ಟವನ್ನು ತೋರಿಸುತ್ತಿವೆ. ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಆದಾಯ ತೆರಿಗೆಯಿಂದ ನುಣುಚಿಕೊಳ್ಳಲು ಕಂಪನಿಗಳ ಈ ರೀತಿ ಮೋಸ ಮಾಡುತ್ತಿವೆ ಎಂಬ ಅನುಮಾನದ ಮೇಲೆ ತನಿಖೆಗೆ ಸೂಚಿಸಲಾಗಿದೆ.