2:56 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ ಗಂಭೀರ

15/06/2026, 20:08

ಮೈಸೂರು(reporterkarnataka.com): ಸಾಂಸ್ಕೃತಿಕ ನಗರಿ ಮೈಸೂರಿನ ರಿಂಗ್ ರಸ್ತೆ ಸಮೀಪದ ಪಬ್ ಒಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೇ, ಈ ಅವಗಢದಲ್ಲಿ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನ ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪ್ರಸಿದ್ಧ ‘ಫಾಕ್ಸ್ ಜೆನ್ ಪಬ್’ನಲ್ಲಿ ಈ ಆಕಸ್ಮಿಕ ದುರಂತ ನಡೆದಿದೆ. ಪಬ್‌ನಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ, ಕ್ಷಣಾರ್ಧದಲ್ಲೇ ಇಡೀ ಕಟ್ಟಡವನ್ನು ಆವರಿಸಿಕೊಂಡಿದೆ. ಬೆಂಕಿಯ ಜ್ವಾಲೆ ಎಷ್ಟೊಂದು ತೀವ್ರವಾಗಿತ್ತೆಂದರೆ ಇಡೀ ಪಬ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

*ಬೆಂಕಿಯ ಕೆನ್ನಾಲಿಗೆಗೆ ಇಬ್ಬರು ಬಲಿ:*
ಈ ಭೀಕರ ದುರಂತದಲ್ಲಿ ಪಬ್ ಒಳಗಿದ್ದ ಸಾಹೀನ್ ಮತ್ತು ಪ್ರಕಾಶ್ ಎಂಬ ಇಬ್ಬರು ಹೊರಬರಲಾರದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಜೀವ ದಹನಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ ಹಾಗೂ ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ. ಪಬ್‌ನಲ್ಲಿ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಅಥವಾ ಇನ್ಯಾವುದೇ ಕಾರಣದಿಂದ ಬೆಂಕಿ ಕಾಣಿಸಿಕೊಂಡಿತೇ ಎಂಬ ನಿಖರ ಕಾರಣ ಇನ್ನು ತನಿಖೆಯಿಂದ ಹೊರಬರಬೇಕಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು