5:19 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ; 25ಕ್ಕೂ ಹೆಚ್ಚು ಬಲಿ

22/04/2025, 20:50

ಶ್ರೀನಗರ(reporterkarnataka.com): ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಶಿವಮೊಗ್ಗದ ಉದ್ಯಮಿ ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಉಗ್ರರ ದಾಳಿಗೆ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ
ಮಂಜುನಾಥ್ ಎಂಬವರು ಸಾವನ್ನಪ್ಪಿದ್ದಾರೆ. ಮಂಜುನಾಥ್ ಅವರು
ಕುಟುಂಬ ಸಮೇತರಾಗಿ ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ಮಧ್ಯಾಹ್ನ ಉಗ್ರರ ದಾಳಿ ನಡೆಸಿದ್ದರು.
ಪಹಲ್ಗಾಮ್‌ನ ಬೈಸರನ್ ಕಾಡು ಪ್ರದೇಶದಲ್ಲಿ ಟ್ರಕ್ಕಿಂಗ್ ಹೋಗುತ್ತಿದ್ದ ಮಹಿಳಾ ಪ್ರವಾಸಿಗರೊಬ್ಬರು ಪೊಲೀಸರಿಗೆ ಕರೆ ಮಾಡಿ ಭಯೋತ್ಪಾದಕರಿಂದ ದಾಳಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಚಾರಣಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ಮಾಡಿದ್ದರು ಎಂದು ಅವರು ಮಾಹಿತಿ ನೀಡಿದ್ದರು. ಒಂದು ವರ್ಷದ ನಂತರ ನಡೆದ ಅತ್ಯಂತ ಭೀಕರ ದಾಳಿಯಾಗಿದೆ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿಯಲ್ಲಿ ಹಲವಾರು ಪ್ರವಾಸಿಗರು ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ತಿಳಿದು ಬಂದಿದೆ.
ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದು, ಐದಕ್ಕೂ ಹೆಚ್ಚು ಜನರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಆದರೆ, ಇದುವರೆಗೆ ಕೇವಲ ಇಬ್ಬರ ಸಾವಿನ ಬಗ್ಗೆ ಖಚಿತ ಮಾಹಿತಿ ದೊರೆತಿದೆ. ಘಟನೆ ಬಗ್ಗೆ ಕೇಂದ್ರ ಸರ್ಕಾರದ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಪ್ರಧಾನಿ ಮೋದಿ ಅವರು ಗೃಹ ಸಚಿವ ಅಮಿತ್‌ ಶಾ ಅವರ ಜೊತೆ ಮಾತುಕತೆ ನಡೆಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ತಕ್ಷಣ
ಕಾಶ್ಮೀರಕ್ಕೆ ತೆರಳಿದ್ದಾರೆ. ಈ ಮಧ್ಯೆ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪ್ರವಾಹ ಪೀಡಿತ ಸ್ಥಳಗಳ ಪರಿಶೀಲನೆಗೆ ತೆರಳಿದ್ದ ಜಮ್ಮು-ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಶ್ರೀನಗರಕ್ಕೆ ವಾಪಸ್‌ ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು