9:50 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯದಿಂದ ಕಾಶ್ಮೀರದಲ್ಲಿ ಉಗ್ರರ ದಾಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ

23/04/2025, 15:14

ಬೆಂಗಳೂರು(reporterkarnataka.com): ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
*ಕನ್ನಡಿಗರನ್ನು ಕರೆತರಲು ಕಾರ್ಮಿಕ ಸಚಿವರಿಗೆ ಸೂಚನೆ:*
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು.. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು.
ಕಾಶ್ಮೀರದ ಪಹಲ್ಗಾಮ್ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.
*ದೇಶದ ಜನರಿಗೆ ಕೇಂದ್ರ ಭದ್ರತೆ ಒದಗಿಸಬೇಕು:*
ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ, ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪೆಹಲ್ಗಾಮಿನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು