6:19 PM Sunday8 - November 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ…

ಇತ್ತೀಚಿನ ಸುದ್ದಿ

ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯದಿಂದ ಕಾಶ್ಮೀರದಲ್ಲಿ ಉಗ್ರರ ದಾಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ

23/04/2025, 15:14

ಬೆಂಗಳೂರು(reporterkarnataka.com): ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
*ಕನ್ನಡಿಗರನ್ನು ಕರೆತರಲು ಕಾರ್ಮಿಕ ಸಚಿವರಿಗೆ ಸೂಚನೆ:*
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು.. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು.
ಕಾಶ್ಮೀರದ ಪಹಲ್ಗಾಮ್ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.
*ದೇಶದ ಜನರಿಗೆ ಕೇಂದ್ರ ಭದ್ರತೆ ಒದಗಿಸಬೇಕು:*
ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ, ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪೆಹಲ್ಗಾಮಿನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು