5:18 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ: ಬಸವರಾಜ ಬೊಮ್ಮಾಯಿ

24/12/2025, 21:57

ಕಲಬುರಗಿ(reporterkarnataka.com): ತಾವು ಸಿಎಂ ಆಗಿದ್ದಾಗ ಕಲಬುರ್ಗಿ ಜಿಲ್ಲೆಯಲ್ಲಿ ಲಕ್ಷ ಜನರಿಗೆ ಉದ್ಯೋಗವಕಾಶ ಕಲ್ಪಿಸುವ ಮಹತ್ವದ ಪಿಎಂ ಮಿತ್ರ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಗೆ ಅಡಿಗಲ್ಲು ಹಾಕಲಾಗಿದೆ. ಆದರೆ, ರಾಜ್ಯ ಸರ್ಕಾರದ ಇಚ್ಚಾಶಕ್ತಿ ಕೊರತೆಯಿಂದ ಯೋಜನೆ ಸಾಕಾರಗೊಳ್ಳುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಸಮಾಧಾನ ಹೊರ ಹಾಕಿದರು.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮುಖವಾಗಿ ರಾಜ್ಯ ಸರ್ಕಾರದ ಆಸಕ್ತಿ ಮೇರೆಗೆ ಆ್ಯಂಕರ್ ಇಂಡಸ್ಟ್ರೀಸ್ ಬರಬೇಕಿತ್ತು. ಭೂಮಿ ಸಹ ನೀಡಲಾಗಿದ್ದರೂ ಜತೆಗೆ ಕಾರ್ಯಾರಂಭಕ್ಕೆ ಅಂತಹ ಅಡ್ಡಿ ಆತಂಕಗಳಿರಲಿಲ್ಲ. ಈ ಕುರಿತು ಈಗಾಗಲೇ ರಾಜ್ಯದ ಜವಳಿ ಸಚಿವ ಶಿವಾನಂದ ಪಾಟೀಲ್ ಅವರೊಂದಿಗೆ ಮಾತನಾಡಲಾಗಿದೆ. ಪ್ರಮುಖವಾಗಿ ತಾವು ಸಂಸತ್ತಿನ ಕಾರ್ಮಿಕ, ಜವಳಿ ಮತ್ತು ಕೌಶಾಲ್ಯಾಭಿವೃದ್ದಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದು, ಹೀಗಾಗಿ ಮುಂದಿನ ತಿಂಗಳು ಬೆಂಗಳೂರಿನಲ್ಲಿ ಇದಕ್ಕೆ ಸಂಬಂಧಸಿದಂತೆ ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಸಚಿವರಾದ ಶಿವಾನಂದ ಪಾಟೀಲ್, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಕೇಂದ್ರದ ಜವಳಿ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಗೂ ರಾಜ್ಯದ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಇಲ್ಲಿಯವರೆಗೆ ಆಗಿರುವ ಕಾರ್ಯ ಪರಿಶೀಲನೆ ಜತೆಗೆ ಮುಂದೆ ಆಗಬೇಕಿರುವ ಕಾರ್ಯಗಳ ಕುರಿತಾಗಿ ಅವಲೋಕನ ನಡೆಸಲಾಗುವುದು. ರಾಜ್ಯ ಸರ್ಕಾರ ತನ್ನ ಕಾರ್ಯಗಳನ್ನು ಪೂರ್ಣಗೊಳಿಸಿದ್ದಲ್ಲಿ ಕೇಂದ್ರ ಸರ್ಕಾರ ತನ್ನೆಲ್ಲ ಸೌಕರ್ಯಗಳನ್ನು ಕಲ್ಪಿಸಿ ಯೋಜನೆ ಸಂಪೂರ್ಣ ಕಾರ್ಯಕ್ಕೆ ಕೈ ಜೋಡಿಸುತ್ತದೆ ಎಂದು ತಿಳಿಸಿದರು.

*ಎಲ್ಲೇ ಮೀರಿದ ಅಕ್ರಮ:*
ರಾಜ್ಯದಲ್ಲಿ ಅಕ್ರಮಗಳು ಸಹ ವ್ಯಾಪಕಗೊಂಡು ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಅಕ್ರಮ ಮದ್ಯ ಎಲ್ಲೆಡೆ ಮಾರಾಟ ಒಂದೇಡೆಯಾದರೆ, ಮಟಕಾ ಜೂಜಾಟಕ್ಕೆ ಅಂಕೆ ಇಲ್ಲದಂತಾಗಿದೆ. ಪೊಲೀಸರೇ ಮುಂದೆ ನಿಂತು ಇದನ್ನೆಲ ಮಾಡಿಸುತ್ತಿದ್ದಾರೆ ಹಾಗೂ ದಂಧೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ವರ್ಗಾವಣೆಗೆ ಹಣ ಕ್ರೋಢಿಕರಿಸಲು ಪೊಲೀಸರು ಇಂತಹ ಅಕ್ರಮಗಳನ್ನು ತಡೆಯಲು ಮುಂದಾಗುತ್ತಿಲ್ಲ ಎಂದು ಬೊಮ್ಮಾಯಿ ಕಿಡಿ ಕಾರಿದರು.

ಕೇಂದ್ರದ 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನುದಾನ ಬಂದಿಲ್ಲ ಹಾಗೂ ಜೆಜೆಎಂ ಕಾಮಗಾರಿಗೂ ಹಣ ಬಂದಿಲ್ಲ ಎನ್ನಲಾಗುತ್ತದೆ. ಆದರೆ ವಾಸ್ತವವಾಗಿ ಅನುದಾನ ಬಳಕೆ ಪ್ರಮಾಣ ಪತ್ರ ಸಮರ್ಪಕವಾಗಿ ಸಲ್ಲಿಸಿಲ್ಲ ಎಂದು ಮಾಜಿ ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಡಾ. ಉಮೇಶ ಜಾಧವ್, ಶಾಸಕರಾದ ಬಸವರಾಜ ಮತ್ತಿಮಡು, ಶರಣು ಸಲಗರ, ಡಾ. ಸಿದ್ದು ಪಾಟೀಲ್, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ಬಿಜೆಪಿ ಕಲಬುರಗಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ ಸೇರಿದಂತೆ ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು