9:50 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ತಾಯಿ ಗದರಿಸಿದಕ್ಕೆ ವಿಷ ಸೇವಿಸಿದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವು

19/02/2023, 14:20

ಮಂಗಳೂರು(reporterkarnataka.com): ತಾಯಿ ಗದರಿಸಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತ ವಯಸ್ಸಿನ ಕುಂಪಲದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾಳೆ.

ಕುಂಪಲ ಆಶ್ರಯ ಕಾಲೊನಿಯಲ್ಲಿ ವಾಸವಿದ್ದ ಸೋಮನಾಥ ಮತ್ತು ಭವ್ಯಾ ದಂಪತಿ ಹಿರಿಯ ಪುತ್ರಿ ಧನ್ಯಾ (17) ಮೃತ ವಿದ್ಯಾರ್ಥಿನಿ. ಮೂಲತಃ ಇವರು ತಮಿಳುನಾಡಿನವರು.

ಈಕೆ ರಾಮಕೃಷ್ಣ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಫೆ. 14 ರಂದು ಧನ್ಯಾ ತಾಯಿ ಭವ್ಯಾ ಮನೆಗೆ ತೆರಳಿದಾಗ ಮನೆಯಲ್ಲಿ ಮಗಳು ಇರಲಿಲ್ಲ. ಮಧ್ಯಾಹ್ನ 3 ಗಂಟೆಗೆ ಧನ್ಯಾ ಮನೆಗೆ ಮರಳಿದ್ದು, ಈ ವೇಳೆ ತಾಯಿ ಮಗಳನ್ನು ಪ್ರಶ್ನಿಸಿದ್ದು, ಇದಕ್ಕೆ ಧನ್ಯಾ ಗೆಳತಿ ಮ‌ನೆಗೆ ಓದಲು ಹೋಗಿದ್ದೆ ಎಂದು ಹೇಳಿದ್ದಾಳೆ. ಫೋನ್ ಯಾಕೇ ಮಾಡಲಿಲ್ಲ ತಾಯಿ ಗದರಿದ್ದಕ್ಕೆ ವಿಷ ಸೇವಿಸಿದ್ದಾಳೆ. ಮನೆಯಲ್ಲಿ ಇದ್ದ ಗೆದ್ದಲಿಗೆ ಹೊಡೆವ ಕೀಟ ನಾಶಕ ಸೇವಿಸಿದ್ದಾಳೆ. ಆಕೆಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಧನ್ಯಾ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾಳೆ.

ಮೃತಳ ತಂದೆ ಸೋಮನಾಥ್ ಮೇಸ್ತ್ರಿ ಕೆಲಸ ಮಾಡುತ್ತಿದ್ದು, ತಾಯಿ ಭವ್ಯಾ ಉಪ್ಪಿನ ಕಾಯಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿ, ಸಂಜೆ ವೇಳೆಯಲ್ಲಿ ಮನೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಒಬ್ಬ ಮಗ ಕೂಡ ಇದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು