11:31 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ತಾಯಿಗೆ ಅವಾಚ್ಯ ಪದದಿಂದ ನಿಂದನೆ: ಮರದ ದೊಣ್ಣೆಯಿಂದ ಹೊಡೆದು ಯುವಕನ ಭೀಕರ ಕೊಲೆ

22/07/2022, 11:31

ಉಡುಪಿ(reporterkarnataka.com):
ಕುಡಿದ ಅಮಲಿನಲ್ಲಿ ತಾಯಿಗೆ ನಿಂದಿಸಿದ ಎಂಬ ಕಾರಣಕ್ಕಾಗಿ ವ್ಯಕ್ತಿಯೊಬ್ಬರನ್ನು ಮರದ ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿ  ನಡೆದಿದೆ.

ಮೃತನನ್ನು ತಮಿಳುನಾಡು ಮೂಲದ ಕುಮಾರ್(32) ಎಂದು ಗುರುತಿಸಲಾಗಿದೆ. ಕುಟ್ಟಿ ಮತ್ತು ನವೀನ್ ಎಂಬವರು ಮರದ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. 

ಕುಟ್ಟಿ ಮತ್ತು ನವೀನ್ ಇಂದ್ರಾಳಿ ಗುರು ಬಾರ್ ನಿಂದ ಮದ್ಯಪಾನ ಮಾಡಿ ನಡೆದುಕೊಂಡು ಬರುತ್ತಿದ್ದರು. ಈ ವೇಳೆ ಕುಮಾರ್ ಕುಡಿದ ಅಮಲಿನಲ್ಲಿ ನವೀನ್ ಮತ್ತು ಕುಟ್ಟಿಯ ತಾಯಿಗೆ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿದ್ದಾನೆ ಎನ್ನಲಾಗಿದೆ. ಈ ಕಾರಣಕ್ಕಾಗಿ ಮೂವರ ನಡುವೆ ಮಾತಿಗೆ ಮಾತು ಬೆಳೆದಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ನವೀನ್ ಮತ್ತು ಕುಟ್ಟಿ ಅಲ್ಲೆ ಇದ್ದ ಮರದ ದೊಣ್ಣೆಯಿಂದ ಕುಮಾರನ ತಲೆಗೆ ಹೊಡೆದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಕುಮಾರ್ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು