12:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಮಸ್ಕಿಯಲ್ಲಿ ಕಾಂಗ್ರೆಸ್ ನಿಂದ ಸೈಕಲ್ ತುಳಿದು ಭಾರಿ ಪ್ರತಿಭಟನೆ

09/07/2021, 07:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕೇಂದ್ರ ಸರಕಾರ ತೈಲ ಬೆಲೆಯೇರಿಕೆ ಮಾಡಿರುವುದರ ವಿರುದ್ಧ ಮಸ್ಕಿ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಮತ್ತು ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ್ ಪಾಟೀಲ್ ಹನುಮೇಶ್ ಬಾಗೋಡಿ, ವೆಂಕಟ ರೆಡ್ಡಿ ಹಾಲಾಪುರ, ಮೃತ್ಯುಂಜಯ ಸ್ವಾಮಿ ಹಿರೇಮಠ, ಗೂಗೇಬಾಳ ಸೇರಿದಂತೆ ಇನ್ನಿತರ ಕಾರ್ಯಕರ್ತರು ಪ್ರಮುಖ ಬೀದಿಗಳಲ್ಲಿ ಸೈಕಲ್ ಜಾಥಾ ನಡೆಸಿದರು.

ಇಂದಿನ ದಿನಗಳಲ್ಲಿ ಬಡವರು ಜೀವನ ಮಾಡು ಬಹಳ ಕಷ್ಟ. ಅಂತಹ ಸಮಯದಲ್ಲಿ ಬಿಜೆಪಿ ಸರಕಾರ ಬಡವರ ಹೊಟ್ಟೆಯ ಮೇಲೆ ಹೊಡೆದಂತೆ ಪ್ರತಿಯೊಂದಕ್ಕೂ ದರ ಏರಿಕೆ ಮಾಡಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ಬಡವರ ಜೀವನಕ್ಕಾಗಿ ಇಂಧನ ದರವನ್ನು ಕಡಿತಗೊಳಿಸಿ ಬಡವರಿಗೆ ದಾರಿದೀಪವಾಗಬೇಕು. ಅದರಂತೆ ಪೆಟ್ರೋಲ್ ಡೀಸೆಲ್ ದರವನ್ನು ಕಡಿಮೆ ಮಾಡಬೇಕೆಂದು ಆಗ್ರಹಿಸಿದರು.

ಈ‌ ಸಂದರ್ಭದಲ್ಲಿ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ‌ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ್. ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ದದ್ದಲ್ ಬಸನಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಹನುಮಂತಪ್ಪ ಮುದ್ದಾಪೂರು ಕೃಷ್ಣ ಚಿಗರಿ ಹಾಗೂ ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಭಾಗವಹಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು