8:36 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಥಾಯ್ಲೆಂಡ್‌ನಲ್ಲಿ ಸ್ಕ್ಯೂಬಾ ಡೈವಿಂಗ್‌: ಮಂಗಳೂರು ಯುವತಿ ದಾರುಣ ಸಾವು

11/04/2023, 23:42

ಮಂಗಳೂರು(reporterkarnataka.com): ಥಾಯ್ಲೆಂಡ್‌ನಲ್ಲಿ ಸ್ಕ್ಯೂಬಾ ಡೈವಿಂಗ್‌ ಮಾಡುವಾಗ ಮಂಗಳೂರಿನ ಯುವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತಪಟ್ಟ ಯುವತಿಯನ್ನು ನಗರದ ಗೋರಿಗುಡ್ಡೆ ನಿವಾಸಿ ಓಷಿನ್‌ ಪಿರೇರಾ (28) ಎಂದು ಗುರುತಿಸಲಾಗಿದೆ. ಗೋರಿಗುಡ್ಡೆ ‘ಹಿಲ್‌ ಸ್ಟೀಕ್‌’ ಅಪಾರ್ಟ್‌ಮೆಂಟ್‌ ಸಮುಚ್ಚಯದಲ್ಲಿ ವಾಸವಿದ್ದ ಓಷಿನ್‌ ಪಿರೇರ ಅವರು ಒಲಿವಿಯಾ ಪಿರೇರ- ದಿ. ಆಸ್ಕರ ಮಾರ್ಟಿನ್‌ ಪಿರೇರಾ ದಂಪತಿಯ ಪುತ್ರಿ.
ಓಷಿನ್ ಪಿರೇರಾ ಅವರು ರಜೆ ಕಳೆಯಲು ಎರಡು ದಿನಗಳ ಹಿಂದಷ್ಟೇ ಥಾಯ್ಲೆಂಡ್‌ಗೆ ತೆರಳಿದ್ದರು. ಮಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಕೆಯ ತಾಯಿ ಒಲಿವಿಯಾ ಪಿರೇರಾ ಅವರು ಬಂಧುಗಳ ಜೊತೆ ಮಂಗಳವಾರ ಥಾಯ್ಲೆಂಡ್‌ಗೆ ಪ್ರಯಾಣ ಬೆಳೆಸಿದರು.
ನಗರದ ಸೇಂಟ್‌ ಆಗ್ನೆಸ್‌ ಕಾಲೇಜು ಬಳಿ ಇರುವ ‘ಮಂಗಳೂರು ಬೇಕಿಂಗ್‌ ಕಂಪನಿ’ ರೆಸ್ಟೋರಂಟ್‌ ಒಡತಿಯಾಗಿದ್ದ ಅವರು ಉದಯೋನ್ಮುಖ ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು