1:57 PM Thursday29 - October 2026
ಬ್ರೇಕಿಂಗ್ ನ್ಯೂಸ್
ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026

ಇತ್ತೀಚಿನ ಸುದ್ದಿ

ಸಿಎಂ ಕುರ್ಚಿ ಅಲಂಕರಿಸಿದ ಬೆನ್ನಲ್ಲೇ 3 ಗ್ಯಾರಂಟಿಗಳಿಗೆ ಸಹಿ ಹಾಕಿದ ದಳಪತಿ ವಿಜಯ್

10/05/2026, 18:10

ಚೆನ್ನೈ(reporterkarnataka.com): ತಮಿಳುನಾಡಿನಲ್ಲಿ ಮೊಟ್ಟ ಮೊದಲ ಬಾರಿಗೆ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಅಧಿಕಾರಕ್ಕೆ ಬಂದಿದ್ದು, ಇಂದು ಚೆನ್ನೈನ ಜವಾಹರ್ಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ವೇಳೆ ನಟ ವಿಜಯ್ ಪ್ರಮಾಣ ವಚನ ಸ್ವೀಕರಿಸಿ ಇದೀಗ ಮುಖ್ಯಮಂತ್ರಿ ಕುರ್ಚಿಯನ್ನು ಅಲಂಕರಿಸಿದ್ದಾರೆ. ಸಿನಿಮೀಯ ಶೈಲಿಯಲ್ಲಿ ಕುರ್ಚಿ ಅಲಂಕರಿಸಿದ ಸಿಎಂ: ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವೇದಿಕೆಯ ಮೇಲೆ ಸಿದ್ಧಪಡಿಸಲಾಗಿದ್ದ ಮುಖ್ಯಮಂತ್ರಿಗಳ ಅಧಿಕೃತ ಆಸನದ ಬಳಿ ಬಂದ ವಿಜಯ್, ಕೆಲ ಕ್ಷಣಗಳ ಕಾಲ ಕುರ್ಚಿಯನ್ನೇ ದಿಟ್ಟಿಸಿ ನೋಡಿದರು. ನಂತರ ಭಾವುಕರಾಗಿ ಕೈಮುಗಿದು, ಅತ್ಯಂತ ನಿಧಾನವಾಗಿ ಸಿಎಂ ಕುರ್ಚಿಯ ಮೇಲೆ ಆಸೀನರಾದರು. ಬೆಳ್ಳಿತೆರೆಯ ಮೇಲೆ ಮಾಸ್ ಎಂಟ್ರಿ ನೀಡುವಂತೆ, ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಕುರ್ಚಿ ಅಲಂಕರಿಸಿದ ದಳಪತಿಯನ್ನು ಕಂಡು ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

ಮಹಿಳಾ ಸುರಕ್ಷತೆ ಮತ್ತು ಉಚಿತ ವಿದ್ಯುತ್‌ಗೆ ಆದ್ಯತೆ: ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ವಿಜಯ್ ಅವರು ಜನರ ನಿರೀಕ್ಷೆಯಂತೆ ಜನಪರ ಯೋಜನೆಗಳಿಗೆ ಚಾಲನೆ ನೀಡಿದರು. ತಮ್ಮ ಮೊದಲ ಕಡತವಾಗಿ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆಗೆ ಸಹಿ ಹಾಕಿದರು. ಇದರ ಜೊತೆಗೆ ರಾಜ್ಯದಲ್ಲಿ ಮಹಿಳೆಯರ ರಕ್ಷಣೆಗಾಗಿ ವಿಶೇಷ ‘ಮಹಿಳಾ ರಕ್ಷಣಾ ಪಡೆ’ ರಚಿಸುವ ಮಹತ್ವದ ನಿರ್ಧಾರಕ್ಕೆ ಅಂಕಿತ ಹಾಕುವ ಮೂಲಕ ತಮಿಳುನಾಡಿನ ಮಹಿಳೆಯರ ಭದ್ರತೆಗೆ ತಾವು ಬದ್ಧ ಎಂಬುದನ್ನು ಸಾಬೀತುಪಡಿಸಿದರು.

ಮಾದಕ ದ್ರವ್ಯ ಮುಕ್ತ ತಮಿಳುನಾಡು ಗುರಿ: ಯುವಶಕ್ತಿಯನ್ನು ಹಾಳುಮಾಡುತ್ತಿರುವ ಮಾದಕ ವ್ಯಸನದ ವಿರುದ್ಧ ಸಮರ ಸಾರಿರುವ ನೂತನ ಸಿಎಂ, ಮೂರನೇ ಪ್ರಮುಖ ಕಡತವಾಗಿ ‘ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ’ ರಚನೆಗೆ ಸಹಿ ಮಾಡಿದರು. ರಾಜ್ಯವನ್ನು ಡ್ರಗ್ಸ್ ಮುಕ್ತವಾಗಿಸುವುದು ತಮ್ಮ ಸರ್ಕಾರದ ಮೊದಲ ಆದ್ಯತೆ ಎಂದು ಘೋಷಿಸಿದ ಅವರು, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಭರವಸೆ ನೀಡಿದರು.

ಜನಸಾಗರದ ನಡುವೆ ಸಂಭ್ರಮ: ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ನೆರೆದಿದ್ದ ಲಕ್ಷಾಂತರ ಅಭಿಮಾನಿಗಳು ತಮ್ಮ ನೆಚ್ಚಿನ ನಟ ರಾಜ್ಯದ ನಾಯಕನಾಗಿ ಹೊರಹೊಮ್ಮಿದ್ದನ್ನು ಕಂಡು ಸಂಭ್ರಮಿಸಿದರು. ಸಿನಿಮಾದಲ್ಲಿ ಅನ್ಯಾಯದ ವಿರುದ್ಧ ಹೋರಾಡುತ್ತಿದ್ದ ವಿಜಯ್, ಈಗ ನೈಜ ಜೀವನದಲ್ಲಿ ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ‘ರಿಯಲ್ ಲೈಫ್’ ಸಿಎಂ ಆಗಿ ಕಾರ್ಯನಿರ್ವಹಿಸುವುದನ್ನು ನೋಡಲು ಇಡೀ ತಮಿಳುನಾಡು ಕಾತರದಿಂದ ಕಾಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು