5:15 PM Sunday28 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು…

ಇತ್ತೀಚಿನ ಸುದ್ದಿ

ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ ಬಂಧನ; 100ಕ್ಕೂ ಹೆಚ್ಚು ಮಂದಿ ವಿರುದ್ಧ ಸುಮೋಟೋ ಕೇಸ್

28/06/2026, 17:05

ಚಿಕ್ಕಬಳ್ಳಾಪುರ(reporterkarnataka.com): ಕೆಂಪೇಗೌಡ ದಿನಾಚರಣೆ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಗಿದೆ. ಜೆಡಿಎಸ್ ವಿರುದ್ಧ ಕಾಂಗ್ರೆಸ್‌ ನಾಯಕರು ತಿರುಗಿ ಬಿದ್ದಿದ್ದು, ಚಿಕ್ಕಬಳ್ಳಾಪುರದಲ್ಲಿ ಸದ್ಯ ರಾಜಕೀಯ ಯುದ್ಧ ತಾರಕಕ್ಕೇರಿದೆ.
ನಿನ್ನೆ ಚಿಕ್ಕಬಳ್ಳಾಪುರದಲ್ಲಿ ನಡೆದ ಸಮಾರಂಭದ ವೇಳೆ ತೀವ್ರ ಜಟಾಪಟಿ ನಡೆದು, ಪ್ರದೀಪ್ ಈಶ್ವರ್ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆಯುವ ವಿಫಲ ಪ್ರಯತ್ನ ಮಾಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೆಂಪೇಗೌಡ ಜಯಂತಿ ವೇಳೆ ನಗರದ ಕನ್ನಡ ಭವನದ ಮುಂದೆ ಶಾಸಕ ಪ್ರದೀಪ್ ಈಶ್ವರ್ ಕಾರಿನತ್ತ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್, ಬಿಜೆಪಿ ಬೆಂಬಲಿತ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತರನ್ನು ಅಕಿಲ್ ರೆಡ್ಡಿ , ಸುಮಂತ್, ಪ್ರಕಾಶ್ ಕೃಷ್ಣ ಎಂದು ಗುರುತಿಸಲಾಗಿದೆ. ಸದ್ಯ ನಾಲ್ಕು ಜನರನ್ನ ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.
ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 4 ಜನ ಆರೋಪಿಗಳ ಜೊತೆಗೆ 100ಕ್ಕೂ ಹೆಚ್ಚು ಜನರ ಮೇಲೆ ಸುಮೋಟೋ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ.

*ಬಂಧನಕ್ಕೆ ಒಳಾಗದ ಕಾರ್ಯಕರ್ತನಿಗೆ ನಿಖಿಲ್ ಕುಮಾರಸ್ವಾಮಿ ಬೆಂಬಲ:*
ಈತನ್ಮಧ್ಯೆ, ಪ್ರದೀಪ್ ಈಶ್ವರ್ ಕಾರಿನ ಮೇಲೆ ಚಪ್ಪಲಿ ಎಸೆದ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ಬಂಧಿತ ಜೆಡಿಎಸ್ ಕಾರ್ಯಕರ್ತನಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬೆಂಬಲ ವ್ಯಕ್ತಪಡಿಸಿದ್ದಾರೆ.ಆದರೆ ಚಪ್ಪಲಿ ಎಸೆದ ಪ್ರಕರಣವನ್ನು ನಿಖಿಲ್ ಕುಮಾರಸ್ವಾಮಿ ಖಂಡಿಸಿಲ್ಲ ಅನ್ನೋದು ಗಮನಾರ್ಹ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ನಿಖಿಲ್ ಕುಮಾರಸ್ವಾಮಿ, ನಿನ್ನೆ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಚಿಕ್ಕಬಳ್ಳಾಪುರದಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ, ಚಿಕ್ಕಬಳ್ಳಾಪುರ ಜಿಲ್ಲಾ ಪಕ್ಷದ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಶ್ರೀ ಅಕಿಲ್ ರೆಡ್ಡಿ ಜೀಡಮಾಕಲಹಳ್ಳಿ ಅವರನ್ನು ಬಂಧಿಸಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದ್ದಾರೆ.
‘ಅಕಿಲ್ ರೆಡ್ಡಿ ಜೀಡಮಾಕಲಹಳ್ಳಿ ಅವರಿಗೆ ಬೇಕಾದ ಸಂಪೂರ್ಣ ಕಾನೂನಿನ ಬೆಂಬಲ ನೀಡಿ, ನಮ್ಮ ಕಾರ್ಯಕರ್ತನ ರಕ್ಷಣೆಗೆ ನಾನು ಬದ್ಧನಾಗಿದ್ದೇನೆ.ನಮ್ಮ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಎದೆಗುಂದದಿರಿ.ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ವಿರೋಧ ಪಕ್ಷದ ಕಾರ್ಯಕರ್ತರನ್ನು ಹತ್ತಿಕ್ಕುವ ಪ್ರಯತ್ನವನ್ನು ನಾವು ಸಹಿಸುವುದಿಲ್ಲ. ಕಾನೂನು ಎಲ್ಲರಿಗೂ ಒಂದೇ. ನಮ್ಮ ಕಾರ್ಯಕರ್ತನಿಗೆ ನ್ಯಾಯ ಸಿಗುವವರೆಗೆ ನಾವು ವಿಶ್ರಮಿಸುವುದಿಲ್ಲ’ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

*ಯುಟಿ ಖಾದರ್ ಖಂಡನೆ:*
ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಆರೋಗ್ಯ ಸಚಿವ ಯು.ಟಿ ಖಾದರ್, ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ವಿಪಕ್ಷಗಳು ರಾಜಕೀಯ ಮಾಡಲಿ, ಆದ್ರೆ ಚಪ್ಪಲಿ ಹಿಡಿದು ರಾಜಕೀಯ ಮಾಡಬಾರದು. ಪ್ರದೀಪ್ ಈಶ್ವರ್ ಅವರಿಗೆ ಯಾರು ಚಪ್ಪಲಿ ಎಸೆದ್ರೋ, ಅವರೇ ಮುಂದೆ ಒಂದು ದಿನ ಬಂದು ಹಾರ ಹಾಕಿ ಅಭಿನಂದಿಸುವ ಕಾಲವೂ ಬರುತ್ತೆ ಎಂದು ಹೇಳಿದರು.
ಶಾಸಕ ಪ್ರದೀಪ್ ಈಶ್ವರ್ ಪರವಾಗಿ ಕಾಂಗ್ರೆಸ್ ಪಕ್ಷ ನಿಲ್ಲಲಿದೆ ಎಂದು ಹೇಳಿದ ಆರೋಗ್ಯ ಸಚಿವ ಯು.ಟಿ ಖಾದರ್, ದೇವೇಗೌಡರು ಪ್ರಧಾನಿಯಾದಾಗ ನಾವು ತುಂಬ ಖುಷಿ ಪಟ್ಟಿದ್ವಿ. ಡಿ.ಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಎಚ್‌ಡಿ ದೇವೇಗೌಡರನ್ನ ಭೇಟಿಯಾಗಿ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ್ರು. ಆದ್ರೆ ಅವರ ಪಕ್ಷದ ಕಾರ್ಯಕರ್ತರು ಕಾಲಲ್ಲಿ ಹಾಕಿರುವ ಚಪ್ಪಲಿ ಹಿಡಿದು ರಾಜಕೀಯ ಮಾಡುತ್ತಿದ್ದಾರೆ, ದ್ವೇಷ ರಾಜಕಾರಣವನ್ನ ರಾಜ್ಯದ ಜನ ಒಪ್ಪಲ್ಲ. ಪ್ರದೀಪ್ ಈಶ್ವರ್ ಜೊತೆ ನಾವೆಲ್ಲ ಇದ್ದೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು