ಇತ್ತೀಚಿನ ಸುದ್ದಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ನಿರ್ಬಂಧ ವಿಚಾರ ಸರಕಾರ ನಿರ್ಧಾರ ಕೈಗೊಳ್ಳಬೇಕು: ಸ್ಪೀಕರ್ ಖಾದರ್
24/12/2025, 23:05
ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಪೊಲೀಸ್ ನಿರ್ಬಂಧ ವಿಚಾರ ಸಂಬಂಧ ಸರಕಾರ ನಿರ್ಧಾರ ತೆಗೆದುಕೊಳ್ಳಬೇಕು.
ಸ್ಪೀಕರ್ ಆಗಿ ಎಲ್ಲವನ್ನೂ ಮಾತನಾಡಲು ಆಗಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ಮಂಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು,
ನಮ್ಮ ವೈಯಕ್ತಿಕ ಅಭಿಪ್ರಾಯ ಯಾವುದೇ ಇರಬಹುದು. ಆದರೆ, ಸಂವಿಧಾನ ಬದ್ಧ ಸ್ಥಾನದಲ್ಲಿದ್ದುಕೊಂಡು ಆ ಬಗ್ಗೆ ಹೆಚ್ಚು ಮಾತನಾಡಲು ಆಗಲ್ಲ.
ಸರ್ಕಾರ ಈ ಬಗ್ಗೆ ಚರ್ಚೆ ಮಾಡಿ ಸೂಕ್ತ ವ್ಯವಸ್ಥೆ ಮಾಡಬೇಕು.
ನನಗೆ ಸಾರ್ವಜನಿಕವಾಗಿ ಈ ಬಗ್ಗೆ ಜಾಸ್ತಿ ಚರ್ಚೆ ಮಾಡಲು ಆಗೋದಿಲ್ಲ. ಯಾವ ಯಾವ ಸಚಿವರಿಗೆ ಹೇಳಬೇಕು ಅವರಿಗೆ ಹೇಳ್ತೆವೆ ಎಂದರು.
ಊರವರು ಸಂತೋಷದಿಂದ ಇರುವ ವಾತಾವರಣ ನಿರ್ಮಾಣ ಮಾಡಬೇಕು.
ಇದು ಸರ್ಕಾರ ಹಾಗೂ ಅಧಿಕಾರಿಗಳ ಜವಾಬ್ದಾರಿ ಎಂದು ಅವರು ನುಡಿದರು.












