11:00 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಊಟ ಮುಗಿಸಿ ಅರ್ಧ ತಾಸಿನಲ್ಲೇ ಎಂಟ್ರಿ ಕೊಟ್ಟ ಮುಖ್ಯಮಂತ್ರಿ: ರಿಲಾಕ್ಸ್ ಮೂಡ್ ನಲ್ಲಿದ್ದ ಅಧಿಕಾರಿಗಳು ಕಕ್ಕಾಬಿಕ್ಕಿ!!

30/05/2025, 18:03

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭಾ ಸಭಾಂಗಣದಲ್ಲಿ ಡಿಸಿ ಮತ್ತು ಸಿಇಒಗಳ ಜತೆ ನಡೆಸಿದ ಸಭೆಯಲ್ಲಿ ಮಧ್ಯಾಹ್ನ ಊಟದ ಬಿಡುವು ಮುಗಿಸಿ ಸರಿಯಾಗಿ 30 ನಿಮಿಷದಲ್ಲಿ ಸಿಎಂ ಎಂಟ್ರಿ ಕೊಟ್ಟಿದ್ದು, ಇನ್ನೂ ಊಟದ ರಿಲಾಕ್ಸ್ ಮೂಡ್ ನಲ್ಲಿದ್ದ ಅಧಿಕಾರಿಗಳು ಕಕ್ಕಾಬಿಕ್ಕಿಯಾದರು.
ಅಧಿಕಾರಿ ವರ್ಗಕ್ಕೆ ಮತ್ತು ಸಚಿವರುಗಳಿಗೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಮುಖ್ಯಮಂತ್ರಿಗಳು ಊಟಕ್ಕೆಂದು ಮನೆಗೆ ತೆರಳಿದರು. ಸಿಎಂ ಮನೆಗೆ ಹೋಗಿದ್ದರಿಂದ ಅವರು ಊಟ ಮುಗಿಸಿ ಬರುವುದು ಲೇಟಾಗಬಹುದು ಎಂದು ಅಧಿಕಾರಿಗಳು ರಿಲಾಕ್ಸ್ ಮೂಡ್ ನಲ್ಲಿ ಊಟ ಮಾಡುತ್ತಿದ್ದರು. ಆದರೆ, ಮುಖ್ಯಮಂತ್ರಿಗಳು ಊಟ ಮುಗಿಸಿ ಸರಿಯಾಗಿ 30 ನಿಮಿಷಕ್ಕೆ ಸಮ್ಮೇಳನ‌ ಸಭಾಂಗಣಕ್ಕೆ ಖಡಕ್ ಎಂಟ್ರಿ ಕೊಟ್ಟರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡು, “ಸರ್ ಅಧಿಕಾರಿಗಳು ಇನ್ನೂ ಊಟಕ್ಕೆ ಹೋಗಿದ್ದಾರೆ ಸರ್, ಬರ್ತಾರೆ ಎಂದು ಸಮಾಧಾನಗೊಳಿಸಿದರು.
ಮುಖ್ಯಮಂತ್ರಿಗಳು ಸರಿಯಾದ ಸಮಯಕ್ಕೆ ಬಂದ ಸುದ್ದಿ ಕೇಳಿ ಬ್ಯಾಂಕ್ವೆಂಟ್ ಹಾಲ್ ನಲ್ಲಿದ್ದ ಅಧಿಕಾರಿಗಳು, ಸಚಿವರು ತಡಬಡಾಯಿಸಿ ದೌಡಾಯಿಸಿದರು.‌
ಊಟಕ್ಕೆ ಬಿಡುವು ಕೊಡುವಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು 45 ನಿಮಿಷ ಬಿಡುವು ಕೊಡೋಣ ಎಂದಿದ್ದರು. ಮುಖ್ಯಮಂತ್ರಿಗಳು ಅರ್ಧ ಗಂಟೆ ಸಾಕು ಎಂದು ಹೇಳಿದ್ದರು. ತಮ್ಮ ಸೂಚನೆಯಂತೆ ಮುಖ್ಯಮಂತ್ರಿಗಳು ಸರಿಯಾಗಿ 30 ನಿಮಿಷಕ್ಕೆ ಬಂದಿದ್ದು ಅಧಿಕಾರಿಗಳು, ಸಚಿವರನ್ನು ಕಕ್ಕಾಬಿಕ್ಕಿಯಾಗಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು