6:17 PM Thursday11 - September 2025
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ…

ಇತ್ತೀಚಿನ ಸುದ್ದಿ

ಗೋ ರಥಯಾತ್ರೆಯ ಸಮಾರೋಪ ಸಮಾರಂಭದ ಕಾರ್ಯಾಲಯ ಕದ್ರಿಯಲ್ಲಿ ಉದ್ಘಾಟನೆ

16/03/2025, 20:33

ಮಂಗಳೂರು(reporterkarnataka.com): ಗೋ ಸೇವಾ ಗತಿವಿಧಿ ಕರ್ನಾಟಕ ರಾಧಾ ಸುರಭಿ ಗೋ ಮಂದಿರ ಇವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯಾದ್ಯಂತ ಸಂಚರಿಸಿದ ಗೋ ರಥಯಾತ್ರೆಯ ಸಮಾರೋಪ ಸಮಾರಂಭದ ಕಾರ್ಯಾಲಯವು ಕದ್ರಿ ಮಲ್ಲಿಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಉದ್ಘಾಟನೆಗೊಂಡಿತು.


ಈ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಹಿಂದೂ ಸಮಾಜದ ಅಸ್ಮಿತೆಯ ಭಾಗವಾದ ಗೋವಿನ ರಕ್ಷಣೆ ನಮ್ಮೆಲ್ಲರ ಹೊಣೆ. ಇಂತಹ ರಥಯಾತ್ರೆಗಳು ಸಮಾಜದಲ್ಲಿ ಗೋ ರಕ್ಷಣೆಯ ಮಹತ್ವವನ್ನು ತಿಳಿಸಿ, ಗೋ ಸಂರಕ್ಷಣೆಗೆ ಪ್ರೇರಣೆಯಾಗುತ್ತಿದೆ ಎಂದರು.
ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು