2:42 AM Sunday11 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಈಗಾಗಲೇ ದೇಶದ ಮೊದಲ ಕ್ವಾಂಟಮ್‌ ಕಂಪ್ಯೂಟರ್‌: ಸಚಿವ ಎನ್‌ ಎಸ್‌ ಭೋಸರಾಜು ಪ್ರತಿಕ್ರಿಯೆ

26/07/2025, 17:35

ಬೆಂಗಳೂರು(reporterkarnataka.com): ದೇಶದ ಮೊದಲ ಕ್ವಾಂಟಮ್‌ ಕಂಪ್ಯೂಟರ್‌ ಈಗಾಗಲೇ ಬೆಂಗಳೂರಿನಲ್ಲಿದ್ದು, ಸೇವೆಯನ್ನು ನೀಡುತ್ತಿದೆ. ಕರ್ನಾಟಕ ರಾಜ್ಯ ಕ್ವಾಂಟಮ್‌ ನಾವಿನ್ಯತೆಯಲ್ಲಿ ದೇಶವನ್ನು ಮುನ್ನಡೆಸುತ್ತಿರುವುದಲ್ಲದೇ, ಭಾರತ ದೇಶದ ಕ್ವಾಂಟಮ್‌ ಅಭಿವೃದ್ದಿಯ ಕೇಂದ್ರಬಿಂದುವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು, ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಟ್ವೀಟ್‌ ನಲ್ಲಿ ಪ್ರತಿಕ್ರಿಯಿಸಿರುವ ಅವರು, ಕರ್ನಾಟಕ ರಾಜ್ಯ ಅದರಲ್ಲೂ ಬೆಂಗಳೂರು ನಗರ ಭಾರತ ದೇಶದ ಕ್ವಾಂಟಮ್‌ ಕ್ಷೇತ್ರದ ಕೇಂದ್ರಬಿಂದುವಾಗಿ ಈಗಾಗಲೇ ಸಾಕಷ್ಟು ಪ್ರಗತಿಯನ್ನು ಸಾಧಿಸಿದೆ. ಇದಕ್ಕೆ ಉತ್ತಮ ಉದಾಹರಣೆ ಕ್ಯೂಪೈಎಐ ಸಂಸ್ಥೆ ಬೆಂಗಳೂರು ನಗರದಲ್ಲಿ ದೇಶೀಯವಾಗಿ ನಿರ್ಮಿಸಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ 25 ಕ್ಯೂಬಿಟ್‌ ಕ್ವಾಂಟಮ್‌ ಕಂಪ್ಯೂಟರ್‌ ಇಂಡಸ್‌ ಉತ್ತಮ ಉದಾಹರಣೆ.
ದೇಶದಲ್ಲೇ ಪ್ರಪ್ರಥಮವಾಗಿ ವಿಶ್ವದ ಪ್ರತಿಷ್ಠಿತ ವೈಜ್ಞಾನಿಕ ಸಂಶೋಧನಾ ಸಂಸ್ಥೆಯಾಗಿರುವ ಐಐಎಸ್‌ಸಿಯಲ್ಲಿ ಕ್ವಾಂಟಮ್‌ ರಿಸರ್ಚ್‌ ಪಾರ್ಕನ್ನು ಸ್ಥಾಪಿಸಲಾಗಿದೆ. ಅದರ ಎರಡನೇ ಹಂತದ ಅಭಿವೃದ್ದಿಗಾಗಿ 48 ಕೋಟಿ ರೂಪಾಯಿಗಳನ್ನು ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಕ್ವಾಂಟಮ್‌ ಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಜುಲೈ 31 ಹಾಗೂ ಆಗಸ್ಟ್‌ 1 ರಂದು ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ನಗರದಲ್ಲಿ ಕ್ವಾಂಟಮ್‌ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಈ ಸಮ್ಮೇಳನದಲ್ಲಿ ಕ್ವಾಂಟಮ್‌ ಕ್ಷೇತ್ರದಲ್ಲಿ ನೊಬೆಲ್‌ ಪ್ರಶಸ್ತಿ ಪುರಸ್ಕೃತರು ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯವನ್ನು ಕ್ವಾಂಟಮ್‌ ಜಾಗತಿಕ ಶಕ್ತಿ ಕೇಂದ್ರವನ್ನಾಗಿಸುವ ನಿಟ್ಟಿನಲ್ಲಿ ರೋಡ್ ಮ್ಯಾಪ್‌ ಸಿದ್ದಪಡಿಸಲಾಗುತ್ತಿದೆ. ಜುಲೈ 31 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ ಇದನ್ನು ಅನಾವರಣಗೊಳಿಸಲಿದ್ದಾರೆ.
ಪ್ರಗತಿಯನ್ನು ಸಂಭ್ರಮಿಸುವಾಗ ನಾವು ಸತ್ಯ ಹಾಗೂ ಅಂಕಿಗಳಲ್ಲಿ ಪರಿಗಣಿಸುವ ಪರಿಪಾಠ ಬೆಳೆಸಿಕೊಳ್ಳುವ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು