8:29 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

04/07/2025, 16:18

ಬೀದರ್(reporterkarnataka.com): ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸದ್ಯ ಹಿನ್ನಡೆಯಾಗಿರಬಹುದು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಬೀದರ್ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ, ಮಹಿಳೆಯರು, ಬಡವರ ಬಗ್ಗೆ ಯೋಚಿಸಿ‌ ಕಾಂಗ್ರೆಸ್ ಪಕ್ಷ ಯೋಜನೆಗಳನ್ನು ರೂಪಿಸುತ್ತದೆ ಎಂದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ. ಕೇಂದ್ರ ಸರ್ಕಾರ ಬರೀ ಪೊಳ್ಳು ಭರವಸೆಯನ್ನು ಕೊಡುತ್ತಾ, ಜನ ಸಾಮಾನ್ಯರನ್ನು ವಂಚಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಜನರೇ ಪಾಠ ಕಲಿಸುತ್ತಾರೆ ಎಂದು ಸಚಿವರು ಕಿಡಿಕಾರಿದರು.
ಎಲ್ಲರ ಸಹಕಾರ ನಮ್ಮ ಪಕ್ಷದ ಮೇಲೆ ಇರಲಿ, ರಾಜ್ಯದ ಏಳು ಕೋಟಿ ಜನ ಸಂಖ್ಯೆಗೆ ಏಕೈಕ ಮಹಿಳಾ ಸಚಿವೆಯಾಗಿರುವೆ. ಸಾಮಾನ್ಯ ಕಾರ್ಯಕರ್ತೆಯಾಗಿದ್ದ ನನ್ನನ್ನು ಗುರುತಿಸಿ ಪಕ್ಷ ನನಗೆ ಟಿಕೆಟ್ ನೀಡಿತು.‌ ಬ್ಲಾಕ್‌, ಜಿಲ್ಲಾ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಕೆಲಸ ಮಾಡಿರುವೆ. ಎರಡು ಬಾರಿ ಸೋತರೂ ಪಕ್ಷ ನನ್ನನ್ನು ಗುರುತಿಸಿತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಕಾರ್ಯಕರ್ತರ ವೈಯಕ್ತಿಕ ಕೆಲಸಗಳಿಗೆ ಹಾಗೂ ಸಮಸ್ಯೆಗಳಿಗೆ ನಾನು ಸದಾ ಸ್ಪಂದಿಸುವೆ. ಕಾಂಗ್ರೆಸ್ ಪಕ್ಷದ ಕಚೇರಿ ನಮ್ಮ ಪಾಲಿಗೆ ದೇವಾಲಯ ವಿದ್ದಂತೆ. ಎಲ್ಲರೂ ಪಕ್ಷಕ್ಕಾಗಿ ದುಡಿಯೋಣ, ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ ಎಂದರು.
ಈ ವೇಳೆ ಮುಖಂಡರು ಹಾಗೂ ಕಾರ್ಯಕರ್ತರು ಆತ್ಮೀಯವಾಗಿ ಸನ್ಮಾನಿಸಿದರು. ಇದೇ ವೇಳೆ ಬಗರ್ ಹುಕುಂ ಸಮಿತಿಗೆ ಆಯ್ಕೆಗೊಂಡ ಸದಸ್ಯರನ್ನು ಸಚಿವರು ಸನ್ಮಾನಿಸಿದರು.
ಈ ವೇಳೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ್ ಚಿಮಕೊಡೆ, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಜಿಲ್ಲಾಧ್ಯಕ್ಷ ಬಸವರಾಜ್ ಜಾಬ್ ಶೆಟ್ಟಿ, ಯುವ ಮುಖಂಡರಾದ ಅನಿಲ್ ಬೆಲ್ದಾರ್, ದತ್ತು ಮುಲಗೆ, ಸಂಜಯ್ ಜಹಾಗೀರ್ ದಾರ್, ಶ್ರೀಕಾಂತ್ ಸ್ವಾಮಿ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು