7:34 PM Saturday19 - July 2025
ಬ್ರೇಕಿಂಗ್ ನ್ಯೂಸ್
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,…

ಇತ್ತೀಚಿನ ಸುದ್ದಿ

ಪಡೀಲ್ ಅಮೃತ ಕಾಲೇಜ್ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ‘ಪಗಪು’ ತುಳು ನಾಟಕದ ಪ್ರಥಮ ಪ್ರದರ್ಶನ

19/07/2025, 15:16

ಮಂಗಳೂರು(reporterkarnataka.com): ತುಳುನಾಡಿನ ಗತಕಾಲದ ಸೌಹಾರ್ದದ ಬದುಕು ಹಾಗೂ ಕಥನಗಳು ಎಲ್ಲರಿಗೂ ಗೊತ್ತಿವೆ, ಆದರೆ ಮುಂದಿನ ಪೀಳಿಗೆಗೆ ಸೌಹಾರ್ದತೆಯನ್ನು ಸಾರುವ ಕಾರ್ಯ ಆಗಬೇಕಿದೆ, ಈ ನಿಟ್ಟಿನಲ್ಲಿ ನಾಟಕ ಹಾಗೂ ಸಾಂಸ್ಕೃತಿಕ ರೂಪಕಗಳು ಹೆಚ್ಚು ಪರಿಣಾಮಕಾರಿಯಾಗುವುದು ಎಂದು ಜಿಎಸ್ಟಿ-ಆದಾಯ ತೆರಿಗೆ ಸಲಹೆಗಾರ ಯು. ಪುಂಡರೀಕಾಕ್ಷ ಮೂಲ್ಯ ಹೇಳಿದರು.
ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿರ್ಮಿಸಿದ, ಪಡೀಲ್ ಅಮೃತ ಕಾಲೇಜ್ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ‘ಪಗಪು’ ತುಳು ನಾಟಕದ ಪ್ರಥಮ ಪ್ರದರ್ಶನವನ್ನು ಬಲ್ಮಠ ಸರಕಾರಿ ಪಿಯು ಕಾಲೇಜಿನಲ್ಲಿ ಉದ್ಘಾಟಿಸಿ ಮಾತನಾಡಿದರು.
ಜಾತಿ, ಮತ, ಭೇದವನ್ನು ಮರೆತು ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ತುಳು ಭಾಷೆಗೆ ಇದೆ. ತುಳುವಿನ ಮೂಲಕ ನಾವೆಲ್ಲರೂ ಒಗ್ಗಟ್ಟನ್ನು ಮತ್ತು ಬಾಂಧವ್ಯವನ್ನು ಬೆಸೆಯೋಣ ಎಂದು ಪುಂಡರೀಕಾಕ್ಷ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಇಂಟ್ಯಾಕ್ ಮಂಗಳೂರು ಘಟಕದ ಸಂಚಾಲಕ ಸುಭಾಶ್ ಬಸು, ಅಮೃತ ಕಾಲೇಜ್ ಪ್ರಾಂಶುಪಾಲರಾದ ಡಾ.ಚಂದ್ರಹಾಸ ಕಣ್ವತೀರ್ಥ, ಬಲ್ಮಠ ಸರಕಾರಿ ಪಿ.ಯು ಹೆಣ್ಮಕ್ಕಳ ಕಾಲೇಜಿನ ಪ್ರಾಂಶುಪಾಲರಾದ ವನಿತಾ ದೇವಾಡಿಗ ಶುಭ ಕೋರಿ ಮಾತನಾಡಿದರು.


ನಾಟಕದ ನಿರ್ದೇಶಕ ಜಗನ್ ಪವಾರ್ ಬೇಕಲ್ ಸ್ವಾಗತಿಸಿ ನಿರೂಪಿಸಿದರು. ಅಕಾಡೆಮಿ ಸದಸ್ಯ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು