10:06 PM Wednesday4 - November 2026
ಬ್ರೇಕಿಂಗ್ ನ್ಯೂಸ್
ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ…

ಇತ್ತೀಚಿನ ಸುದ್ದಿ

ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ, ಅದು ನಮ್ಮದೇ ಜಾಗ: ಪ್ರಮೋದಾದೇವಿ ಒಡೆಯರ್

04/11/2026, 20:51

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಮೈಸೂರು ದಸರಾ ಸಂಪ್ರದಾಯಗಳ ಕುರಿತ ಗೊಂದಲಗಳ ನಡುವೆ, ಅರಮನೆಯ ಭೂಮಿ ಹಸ್ತಾಂತರದ ಬಗ್ಗೆ ಸ್ಪಷ್ಟನೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ನೀಡಿದ್ದಾರೆ. ಅರಮನೆಯ ಸಂಪೂರ್ಣ ಜಾಗವನ್ನು ಸರ್ಕಾರಕ್ಕೆ ಹಸ್ತಾಂತರಿಸಿಲ್ಲ ಎಂದು ಅವರು ಖಚಿತಪಡಿಸಿದ್ದಾರೆ.
ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ, ಅದು ನಮ್ಮದೇ ಜಾಗ ಎಂದು ಸ್ಪಷ್ಟಪಡಿಸಿದ್ದಾರೆ. ”ಅರಮನೆ ಬೋರ್ಡ್ ಸರ್ಕಾರದ್ದು, ಅರಮನೆ ಜಾಗ ಸರ್ಕಾರದ್ದು. ಅವರು ಉಳಿದುಕೊಳ್ಳಲು ಒಂದಿಷ್ಟು ಜಾಗ ಕೊಟ್ಟಿದ್ದೇವೆ, ಅಷ್ಟೇ” ಎಂದು ಸಚಿವ ಯತೀಂದ್ರ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದೀಗ ಪ್ರಮೋದಾ ದೇವಿ ಸಚಿವರ ಹೆಸರು ಉಲ್ಲೇಖಿಸದೆ ತಿರುಗೇಟು ನೀಡಿದ್ದಾರೆ. ಅರಮನೆಯ ವಾಸದ ವಿಭಾಗ ಈಗಲೂ ರಾಜಮನೆತನದ ಸುಪರ್ದಿಯಲ್ಲಿದೆ. ಸಾರ್ವಜನಿಕರು ವೀಕ್ಷಿಸುವ ಮುಂಭಾಗದ ಭಾಗವನ್ನು ಮಾತ್ರ ಸರ್ಕಾರ ನಿರ್ವಹಿಸುತ್ತಿದೆ. ಅಂಬಾರಿ ಮತ್ತು ಸಿಂಹಾಸನ ಸೇರಿದಂತೆ ಕೆಲವು ಪ್ರಮುಖ ವಸ್ತುಗಳು ಎಂದಿಗೂ ಸರ್ಕಾರದ ವಶಕ್ಕೆ ಹೋಗಿಲ್ಲ, ಅವು ಸದಾ ಅರಮನೆಯಲ್ಲೇ ಇವೆ ಎಂದು ಪ್ರಮೋದಾದೇವಿ ಒಡೆಯರ್ ಒತ್ತಿ ಹೇಳಿದರು.
1998ರ ಪ್ಯಾಲೆಸ್ ಅಕ್ವಿಸಿಷನ್ ಮತ್ತು ಟ್ರಾನ್ಸ್‌ಫರ್ ಆಕ್ಟ್ (ಸುಗ್ರೀವಾಜ್ಞೆ) ಅನ್ನು ತಮ್ಮ ಪತಿ ದಿ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಇದರ ಪರಿಣಾಮವಾಗಿ, ಅರಮನೆಯ ವಾಸದ ಭಾಗದ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನ್ಯಾಯಾಲಯ ಆದೇಶ ನೀಡಿದೆ. ಧಾರ್ಮಿಕ ಆಚರಣೆಗಳಿಗೆ ಅಡ್ಡಿ ಉಂಟಾದರೆ ನ್ಯಾಯಾಲಯವನ್ನು ಸಂಪರ್ಕಿಸುವ ಹಕ್ಕು ರಾಜಮನೆತನಕ್ಕಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಕ್ಕೆ ಪ್ರಮೋದಾದೇವಿ ಧನ್ಯವಾದ ಅರ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು