4:39 AM Wednesday16 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ʼThe Idea of Bharath’: ಫೆಬ್ರವರಿ 18 ಮತ್ತು 19ರಂದು ಮಂಗಳೂರು ಲಿಟ್‌ಫೆಸ್ಟ್‌ನ 5ನೇ ಆವೃತ್ತಿ

14/02/2023, 21:35

ಮಂಗಳೂರು(reporterkarnataka.com): ಮಂಗಳೂರು ಲಿಟ್‌ ಫೆಸ್ಟ್‌ನ ಐದನೇ ಆವೃತ್ತಿಯು ʼThe Idea of Bharath’ ಎಂಬ ಥೀಮ್‌ನಡಿಯಲ್ಲಿ ಫೆಬ್ರವರಿ 18 ಮತ್ತು 19 ರಂದು ಎರಡು ದಿನಗಳ ಕಾಲ ನಗರದ ಟಿಎಂಎ ಪೈ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಜರುಗಲಿದೆ.

ಒಟ್ಟು 25 ಸೆಷನ್‌ಗಳ ವಿಚಾರ ಸಂಕಿರಣ ಆಯೋಜಿಸಲಾಗಿದ್ದು, ಇದರಲ್ಲಿ 55 ಕ್ಕೂ ಅಧಿಕ ವಾಗ್ಮಿಗಳು ಭಾಗವಹಿಸಲಿದ್ದಾರೆ. ಪ್ರತಿ ಸೆಷನ್‌ನ ಕೊನೆಗೆ ಸಾಹಿತ್ಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಇರಲಿದ್ದು, ಗೆದ್ದವರಿಗೆ ಪುಸ್ತಕವನ್ನು ಬಹುಮಾನವಾಗಿ ನೀಡಲಾಗುತ್ತದೆ.
ಲಿಟ್‌ ಫೆಸ್ಟ್‌ನಲ್ಲಿ 2 ಸಿನಿಮಾಗಳ ಪ್ರದರ್ಶನ ಜರುಗಲಿದೆ. ಅಲ್ಲದೇ 16 ಪುಸ್ತಕ ಮಳಿಗೆಗಳು ಕೂಡ ಇರಲಿವೆ. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ತುಕಾರಾಮ್ ಪೂಜಾರಿ ಅವರಿಗೆ ಈ ಬಾರಿಯ ಪ್ರಶಸ್ತಿ ಪ್ರದಾನಿಸಲಾಗುತ್ತಿದೆ. ಪುಸ್ತಕ ಮಳಿಗೆ, ತುಳು ಅಕ್ಷರ ಕಲಿಕಾ ಕಾರ್ಯಾಗಾರ, ಮಕ್ಕಳ ಸಾಹಿತ್ಯ ಅಭಿರುಚಿ ಮತ್ತು ಕಥೆಯ ಬಗ್ಗೆ ಪಾಲಕರಿಗೆ ಆಸಕ್ತಿ ಬೆಳೆಸುವ ದೃಷ್ಟಿಯಿಂದ ಅವಧಿ, ಲೇಖಕರೊಂದಿಗೆ ಸಂವಾದ – (ಹರಟೆ ಕಟ್ಟೆ) ಈ ಬಾರಿಯ ಲಿಟ್ ಫೆಸ್ಟ್‌ನ ವಿಶೇಷತೆಯಾಗಿದೆ.

ಉದ್ಘಾಟನಾ ಅವಧಿ ʼThe Idea of Bharath In Amrithkal: Reclaiming The Right Path-The Way Forward ಪರಿಕಲ್ಪನೆಯ ಅಡಿ ಜರುಗಲಿದ್ದು, ಆರ್‌. ಜಗ್ನನಾಥ್‌, ವಿನಯ್‌ ಹೆಗ್ಡೆ, ವಿ. ನಾಗರಾಜ್‌ ಅವರು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು