2:43 PM Sunday1 - November 2026
ಬ್ರೇಕಿಂಗ್ ನ್ಯೂಸ್
ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ… ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಎಸ್‌ಐಟಿ ನೂತನ ಮುಖ್ಯಸ್ಥರಾಗಿ ಚೇತನ್… ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಅಸ್ಸಾಂ, ಬಂಗಾಳದಲ್ಲಿ ಪ್ರವಾಹದ ಎಚ್ಚರಿಕೆ ರಾಜ್ಯಾದ್ಯಂತ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್; ಮುಳಬಾಗಿಲಿನಲ್ಲಿ… ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ ಹಣದ ಬೇಡಿಕೆಯಿಟ್ಟ ಸಂತ್ರಸ್ತೆ: 10 ಮಂದಿ ಆರೋಪಿಗಳ… ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ 4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ…

ಇತ್ತೀಚಿನ ಸುದ್ದಿ

ಇಂಡಿಯಾ ಕೂಟ ರ‍್ಯಾಲಿ ಎಫೆಕ್ಟ್!: ಸರಣಿ ಧರಣಿಯಿಂದ 2.5 ಲಕ್ಷ ಅಂಗಡಿ ಬಂದ್, ಶೇ.80 ವ್ಯಾಪಾರಕ್ಕೆ ಹೊಡೆತ

01/11/2026, 14:31

ನವದೆಹಲಿ(reporterkarnataka.com): ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ರಾಹುಲ್​ ಗಾಂಧಿ ನೇತೃತ್ವದ ಇಂಡಿಯಾ ಕೂಟದ ಸರಣಿ ಪ್ರತಿಭಟನೆಗಳು ಸದ್ಯ ದೆಹಲಿಯ ವ್ಯಾಪಾರಿಗಳಿಗೆ ತೀವ್ರ ಹೊಡೆತ ನೀಡುತ್ತಿವೆ.ವಿಪಕ್ಷಗಳು ಮತ್ತು ಕಾಕ್ರೋಚ್​ ಜನತಾ ಪಕ್ಷ (ಸಿಜೆಪಿ) ಕೈಗೊಂಡಿರುವ ಪ್ರತಿಭಟನೆಯೂ ವ್ಯಾಪಾರದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯ ವ್ಯಾಪಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೇ, ಇಂಡಿಯಾ ಒಕ್ಕೂಟವು ಭಾನುವಾರ ಅಂದರೆ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದು, ಚುನಾವಣಾ ಆಯೋಗದ ಅಕ್ರಮಗಳ ಆರೋಪದ ವಿರುದ್ಧ ಧರಣಿ ನಡೆಸುತ್ತಿರುವುದಾಗಿ​ ಹೇಳಿಕೊಂಡಿದೆ. ಇದರ ಬೆನ್ನಲ್ಲೇ, ಚೇಂಬರ್ ಆಫ್ ಟ್ರೇಡ್ ಅಂಡ್ ಇಂಡಸ್ಟ್ರಿ (ಸಿಟಿಐ), ದೀಪಾವಳಿ ಹಬ್ಬದ ಸಮಯದಲ್ಲಿ ಸುಮಾರು 2.5 ಲಕ್ಷ ಅಂಗಡಿಗಳನ್ನು ಮುಚ್ಚಲಾಗಿದೆ ಮತ್ತು ರ್ಯಾಲಿಯಿಂದಾಗಿ ಶೇ.80ರಷ್ಟು ವ್ಯಾಪಾರಗಳು ಸ್ಥಗಿತಗೊಂಡಿವೆ ಎಂದು ಆರೋಪಿಸಿದೆ.ಈ ಬೆಳವಣಿಗೆಗಳನ್ನು ಉಲ್ಲೇಖಿಸಿ ಸಿಟಿಐ ನಾಲ್ಕನೇ ಬಾರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರವನ್ನು ಬರೆದಿರುವುದಾಗಿಯೂ ಹೇಳಿದೆ. ರಾಮಲೀಲಾ ಮೈದಾನದ ಸುತ್ತಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ಥಗಿತಗೊಂಡಿದ್ದು, ಈ ಪ್ರದೇಶದಲ್ಲಿ ವ್ಯಾಪಾರ ಚಟುವಟಿಕೆಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ಈ ಮಧ್ಯೆ, ಉದ್ಯಮಿಗಳು ರಾಹುಲ್​ಗೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ, ಅವರು ಶನಿವಾರ ವಿಡಿಯೋವನ್ನು ರಿಲೀಸ್​ ಮಾಡಿದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು