5:04 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮುಂದಿನ ತಲೆಮಾರಿಗೆ ಪ್ರಕೃತಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಡಾ. ಜಿ. ಸಂತೋಷ್

05/08/2026, 10:40

ಮಂಗಳೂರು(reporterkarnataka.com): ನಮ್ಮ ಸುತ್ತಲಿನ ಪರಿಸರ ನಾವೇ ಹಾಳು ಮಾಡುತ್ತಿದ್ದೇವೆ. 2019ರಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನಡೆದ ಭೀಕರ ಪ್ರಕೃತಿ ದುರಂತಕ್ಕೆ ನಮ್ಮ ಸ್ವಾರ್ಥ ಮತ್ತು ಬೇಜವಾಬ್ದಾರಿತನವೇ ಮೂಲ ಕಾರಣ ಎಂದು ಜಿಲ್ಲಾ ನಗರಾಭಿವೃದ್ಧಿ ಸೆಲ್‌ನ ಯೋಜನಾ ನಿರ್ದೇಶಕ ಡಾ. ಜಿ. ಸಂತೋಷ್ ಕುಮಾರ್‌ ಹೇಳಿದರು.
ಮಂಗಳೂರು ಕಥೋಲಿಕ್ ಧರ್ಮಪ್ರಾಂತ್ಯದ ಪರಿಸರ ಆಯೋಗದ ನೇತೃತ್ವದಲ್ಲಿ ನಗರದ ಬೆಂದೂರ್ ಚರ್ಚ್‌ನ ಸಭಾಂಗಣದಲ್ಲಿ ಪರಿಸರ ಆಯೋಗದ ಸಂಚಾಲಕರು ಹಾಗೂ ಕಾರ್ಯದರ್ಶಿಗಳಿಗಾಗಿ ಆಯೋಜಿಸಲಾಗಿದ್ದ ವಿಶೇಷ ಪರಿಸರ ಮಾಹಿತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.


ನಮ್ಮ ದೇಶದಲ್ಲಿ ಪರಿಸರವನ್ನು ಉಳಿಸಿ, ಸಂರಕ್ಷಿಸುವ ಕಾರ್ಯ ಯುದ್ಧೋಪಾದಿಯಲ್ಲಿ ಆಗಬೇಕು. ಪ್ರಕೃತಿಯನ್ನು ಹಾಳು ಮಾಡಿದ್ದರಿಂದಲೇ ಇಂದು ನಾವು ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಪರಿಸರವನ್ನು ಕಾಪಾಡಿ, ಅದನ್ನು ನಮ್ಮ ಮುಂದಿನ ತಲೆಮಾರಿಗೆ ಸುರಕ್ಷಿತವಾಗಿ ನೀಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ರಾಜೇಂದ್ರ ಕಲ್ಬಾವಿ ಹಾಗೂ ಹಸಿರು ದಳದ ಪ್ರಾಜೆಕ್ಟ್ ಮ್ಯಾನೇಜರ್ ನಾಗರಾಜ್ ಬಜಾಲ್ ಅವರು ಪರಿಸರ ಸಂರಕ್ಷಣೆಯ ಪ್ರಾಯೋಗಿಕ ಮಾರ್ಗಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಧರ್ಮಕ್ಷೇತ್ರದ ಪರಿಸರ ಆಯೋಗದ ಕಾರ್ಯದರ್ಶಿ ಲುವಿಸ್ ಜೆ. ಪಿಂಟೊ, ಪರಿಸರ ಆಯೋಗದ ಕಾರ್ಯಕಾರಿ ಸಮಿತಿ ಸದಸ್ಯ ವಂ| ಡಾ| ಮೈಕಲ್ ಸಾಂತುಮಾಯೋರ್, ಫಾದರ್ ಮುಲ್ಲರ್‌ ಸಂಸ್ಥೆಗಳ ನಿರ್ದೇಶಕ ವಂ| ಫಾ| ಫಾವುಸ್ಟಿನ್ ಲೋಬೊ, ಭ| ಪ್ಲಾವಿಯ ವಿಲ್ಮಾ, ಸೆಲೆಸ್ತಿನ್ ಡಿಸೋಜ, ಕ್ಲೇಮಂಟ್ ಪಿಂಟೊ, ಫ್ರಾನ್ಸಿಸ್ ಮಿನೇಜಸ್ ಬಾಲ್ಕುಟಜೆ, ಜೀತ್ ಮಿಲನ್ ರೋಚ್, ಚಾರ್ಲ್ಸ್ ಪಾಯ್ಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು