9:10 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಮರೆಯಾದ ಭಾವಗೀತೆಗಳ ಭಾವ; ಅಗಲಿದ ಕಾವ್ಯ ಚೇತನ; ಕವಿ, ನಾಟಕಕಾರ ಡಾ.ಎಚ್. ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಗಣ್ಯರ ಸಂತಾಪ

30/05/2025, 11:13

ಬೆಂಗಳೂರು(reporterkarnataka.com): ಕನ್ನಡ ಭಾವಗೀತೆಗಳ ಭವ್ಯ ಪರಂಪರೆಯ ಪ್ರತಿನಿಧಿ ಡಾ. ಎಚ್.ಎಸ್. ವೆಂಕಟೇಶಮೂರ್ತಿ ಅವರು ಇಂದು ಮುಂಜಾನೆ ನಿಧನರಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸಹಿತ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ಕಾವ್ಯ ಲೋಕಕ್ಕೆಅತಿ ದೊಡ್ಡ ಆಘಾತ ತಂದಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಇಂದು ಮುಂಜಾನೆ ಡಾ. ಎಚ್ಎಸ್ ವಿ ಅವರ ನಿಧನದ ಸುದ್ದಿ ಬಂದ ಕೂಡಲೇ ದಿಗ್ಭ್ರಮೆ ಆಯಿತು. ಕನ್ನಡ ಸಾಹಿತ್ಯದ ಕಾವ್ಯ ಪರಂಪರೆಗೆ ಹೊಸ ಭಾಷ್ಯ ಬರೆದ ಕವಿ ಎಚ್ಎಸ್ ವಿ ಅವರು. ಸದಾ ನಮ್ಮ ಕಿವಿಗಳಲ್ಲಿ ಅನುರಣಿಸುವ ಅವರ ಗೀತೆಗಳು ಸೊಗಸು ಅನನ್ಯವಾದದ್ದು, ಅದು ತೂಗು ಮಂಚದಲ್ಲಿ, ಅಮ್ಮ ನಾನು ದೇವರಾಣೆ, ಲೋಕದ ಕಣ್ಣಿಗೆ ರಾಧೆಯು ಕೂಡ, ಹುಚ್ಚು ಕೋಡಿ ಮನಸು, ಇಂತಹ ಯಾವುದೇ ಗೀತೆಗಳು ನಮ್ಮನ್ನು ಬೇರೊಂದು ಲೋಕದ ಭಾವಲಹರಿಗೆ ಕೊಂಡೊಯ್ಯುತ್ತವೆ.
ಇಂತಹ ಗೀತೆಗಳನ್ನು ಕೊಟ್ಟ ಕವಿ ನಮ್ಮನ್ನು ಇಂದು ಅಗಲಿದ್ದಾರೆ. ನೂರಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಕೊಟ್ಟ ಡಾ. ಎಚ್ ಎಸ್ ವಿ ಬರೀ ಕವಿಯಾಗಿಯಲ್ಲ, ನಾಟಕಕಾರರಾಗಿ, ಅಂಕಣಕಾರರಾಗಿ, ಅನುವಾದ ,ಶಿಶು ಸಾಹಿತ್ಯ, ಹೀಗೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ತಮ್ಮ ಅನನ್ಯ ಕೊಡುಗೆ ಕೊಟ್ಟಿದ್ದಾರೆ. ಬುದ್ಧ ಚರಣ ಮಹಾ ಕಾವ್ಯದ ಮೂಲಕ ಅವರು ಸಾಹಿತ್ಯದ ಮತ್ತೊಂದು ಮಜಲನ್ನು ಸ್ಪರ್ಶಿಸಿದ್ದಾರೆ.
ಕನ್ನಡ ಸಾಹಿತ್ಯ ಅದರಲ್ಲಿಯೂ ವಿಶೇಷವಾಗಿ ಭಾವಗೀತೆಗಳ ಕ್ಷೇತ್ರಕ್ಕೆ ಅವರು ಕೊಟ್ಟ ಕೊಡುಗೆ ಅದ್ಭುತವಾದದ್ದು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಸೇರಿದಂತೆ ನೂರಾರು ಗೌರವ ಸನ್ಮಾನಗಳಿಗೆ ಪಾತ್ರರಾಗಿದ್ದ
ಅವರ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕ ಮಹತ್ವದ ಚೇತನವೊಂದನ್ನು ಕಳೆದುಕೊಂಡಿದೆ .
ಭಗವಂತ ಅವರ ಆತ್ಮಕ್ಕೆ ಶಾಂತಿ ಕೊಡಲಿ, ಅವರ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು