8:06 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಬಯಲು: ಸಿಎಂ

24/07/2025, 21:11

ಬೆಂಗಳೂರು(reporterkarnataka.com): ರಾಜ್ಯದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ ಅಕ್ರಮವೇ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಒಂದೊಂದಾಗಿ ಬಯಲಿಗೆಳೆಯುತ್ತಿದ್ದು, ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆಯೂ ವಿವರಗಳನ್ನು ನೀಡಿದ್ದಾರೆ.
ಕರ್ನಾಟಕದಲ್ಲಿ ಚುನಾವಣಾ ಆಯೋಗ ಅಕ್ರಮಗಳನ್ನು ನಡೆಸಿರುವುದಕ್ಕೆ ನೂರಕ್ಕೆ ನೂರರಷ್ಟು ಸಾಕ್ಷ್ಯಗಳಿವೆ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ನಾನು ಸಂಪೂರ್ಣವಾಗಿ ಅನುಮೋದಿಸುತ್ತೇನೆ. ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ಇದ್ದಕ್ಕಿದ್ದಂತೆಯೇ ಹೊಸ ಮತದಾರರ ಸೇರ್ಪಡೆಯಾಗಿರುವುದು ಮತ್ತು ಹಳೆಯ ಮತದಾರರ ಹೆಸರುಗಳು ರದ್ದಾಗಿರುವುದರ ಬಗ್ಗೆ ನಮ್ಮ ಅನೇಕ ಕಾರ್ಯಕರ್ತರು ದೂರುಗಳನ್ನು ನೀಡಿದ್ದರು.
ನರೇಂದ್ರ ಮೋದಿ ಅವರ ಚುನಾವಣಾ ಗೆಲುವುಗಳಿಗೆ ಅವರ ಜನಪ್ರಿಯತೆಯಾಗಲಿ, ಬಿಜೆಪಿ ಸರ್ಕಾರದ ಸಾಧನೆಗಳಾಗಲಿ ಕಾರಣ ಅಲ್ಲ. ಅದು ಚುನಾವಣಾ ಆಯೋಗದ ಮೂಲಕ ನಡೆಸಿದ ‘’ಮತಗಳ್ಳತನ’’ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆ ಏನು ಕ್ರಮಕೈಗೊಳ್ಳಬೇಕೆಂಬ ಬಗ್ಗೆ ರಾಹುಲ್ ಗಾಂಧಿಯವರು ಮತ್ತು ಎಐಸಿಸಿ ಅಧ್ಯ್ಕಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಮಾಲೋಚಿಸಿ, ನಾವು ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು