9:22 AM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಗಾದಿಗಾಗಿ ಕಿತ್ತಾಟಕ್ಕೆ ಉಪಶಮನ: ದೆಹಲಿಯಲ್ಲಿ ಒಟ್ಟಿಗೆ ಭೋಜನ ಸವಿದ ಸಿಎಂ, ಡಿಸಿಎಂ, ಸಂಪುಟ ಸಹೋದ್ಯೋಗಿಗಳು

17/11/2025, 18:34

ಹೊಸದಿಲ್ಲಿ(reporterkarnataka.com): ರಾಜ್ಯದ ಗದ್ದುಗೆಗಾಗಿ ನಡೆಯುತ್ತಿದ್ದ ಜಂಗೀ ಕುಸ್ತಿ ತಕ್ಕಮಟ್ಟಿಗೆ ಉಪಶಮನಗೊಂಡಿದ್ದು, ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಭೋಜನಕೂಟದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಾಲ್ಗೊಂಡಿದ್ದಾರೆ.


ರಾಜ್ಯದಲ್ಲಿ ನವೆಂಬರ್ ಕ್ರಾಂತಿ ನಡೆಯುತ್ತದೆ ಎಂದು ಪ್ರತಿಪಕ್ಷ ಬಿಜೆಪಿಯ ನಾಯಕರು ಸೆಪ್ಟೆಂಬರ್‌ ತಿಂಗಳಿನಿಂದಲೇ ಕೂಗೆಬ್ಬಿಸುತ್ತಿದ್ದರು. ಮುಖ್ಯಮಂತ್ರಿ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಕೂಡ ಮುಖ್ಯಮಂತ್ರಿ ಗಾದಿಗಾಗಿ ದೆಹಲಿ ಮಟ್ಟದಲ್ಲಿ ಸಾಕಷ್ಟು ಪ್ರಭಾವ ಬೀರಿದ್ದರು. ಆದರೆ, ಸದ್ಯದ ಸ್ಥಿತಿಯಲ್ಲಿ ಮುಖ್ಯಮಂತ್ರಿಯವರನ್ನು ಬದಲಾಯಿಸಲು ಹೈಕಮಾಂಡ್ ಬಳಿ ಯಾವುದೇ ಪ್ರಬಲವಾದ ಕಾರಣಗಳಿಲ್ಲ ಮಾತ್ರವಲ್ಲದೆ ಸಿದ್ದರಾಮಯ್ಯ ಅವರ ಜನಪ್ರಿಯತೆಗೆ ಯಾವುದೇ ಕುಂದು ಬಾರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯವನ್ನು ಕಾಂಗ್ರೆಸ್ ಹೈಕಮಾಂಡ್ ಬದಿಗೆ ಸರಿಸಿದೆ ಎನ್ನಲಾಗಿದೆ.
ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರೆ ಸಚಿವರು ಮತ್ತು ಶಾಸಕರುಗಳ ಜೊತೆಗೆ ದೆಹಲಿಯ ಕರ್ನಾಟಕ ಭವನದಲ್ಲಿ ಮಧ್ಯಾಹ್ನದ ಉಪಹಾರ ಸವಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು