6:23 PM Thursday16 - October 2025
ಬ್ರೇಕಿಂಗ್ ನ್ಯೂಸ್
Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ… ಮೆಡಿಕಲ್‌ ಅಗತ್ಯತೆಗೆ ಪೂರೈಕೆಗೆ ಡ್ರೋನ್‌ ಬಳಕೆಗೆ ಚಾಲನೆ: ಏರ್‌ಬೌಂಡ್‌ ಸಂಸ್ಥೆಯಿಂದ ಡ್ರೋನ್‌ ಮೂಲಕ… Shivamogga | ತೀರ್ಥಹಳ್ಳಿ ಬಾಳೆಬೈಲು ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್

ಇತ್ತೀಚಿನ ಸುದ್ದಿ

ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

16/10/2025, 14:10

ಮಂಗಳೂರು(reporterkarnataka.com): ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ(65) ಅವರು ಅರಶಿಣಮಕ್ಕಿಯ ಮನೆಯಲ್ಲಿ ವಿಧಿವಶರಾಗಿದ್ದಾರೆ.
ಯಕ್ಷಗಾನದ ಅಗ್ರಮಾನ್ಯ ಭಾಗವತರಲ್ಲಿ ಅವರು ಒಬ್ಬರಾಗಿದ್ದರು. ತನ್ನ ಕಂಠಸಿರಿಯಿಂದ ಅಪಾರ ಅಭಿಮಾನಿಗಳ ಮನಸ್ಸಿನಲ್ಲಿ ಮನೆಮಾಡಿದ ಅವರು ಭ್ರಾಮರೀ ಯಕ್ಷವೈಭವದ ಹಲವಾರು ಯಕ್ಷಗಾನಕ್ಕೆ ಭಾಗವತಿಕೆ ಮಾಡಿ ಆ ಪ್ರಸಂಗದ ಯಶಸ್ವಿಗೆ ಕಾರಣಕರ್ತರಾಗಿದ್ದರು. ರಸರಾಗ ಚಕ್ರವರ್ತಿ, ಗಾನಕೋಗಿಲೆ ಎಂದೇ ದಿನೇಶ್ ಅಮ್ಮಣ್ಣಾಯ ಪ್ರಸಿದ್ದರಾಗಿದ್ದರು.
ಪ್ರಸಿದ್ಧ ಭಾಗವತರಾದ ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿದ್ದರು. ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಕಲಾ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಮೇಳದಲ್ಲಿ ದಿಗ್ಗಜ ಕಲಾವಿದರನ್ನು ರಂಗದಲ್ಲಿ ಕುಣಿಸಿದ ಕೀರ್ತಿ ಅಮ್ಮಣ್ಣಾಯರದ್ದು ಆಗಿದೆ. ತುಳು ಪ್ರಸಂಗಗಳಿಗೆ ತನ್ನ ಕಂಠ ಮಾಧುರ್ಯದಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು. ಅತ್ಯದ್ಭುತ ರಾಗ ಸಂಚಾರದ ಮೂಲಕ ಕರುಣಾ ರಸದ ಪದ್ಯಗಳಿಗೆ ಸಾಟಿಯಿಲ್ಲದ ಭಾಗವತ ಎನಿಸಿಕೊಂಡಿದ್ದರು. ಎಡನೀರು ಮೇಳದಲ್ಲೂ ತಿರುಗಾಟ ನಡೆಸಿದ್ದರು. ವಿಶ್ರಾಂತ ಜೀವನ ನಡೆಸುತ್ತಿದ್ದ ಅಮ್ಮಣ್ಣಾಯರು ಭಾಗವತರಾಗಿ ಅನೇಕ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಅಮ್ಮಣ್ಣಾಯರ ಅಗಲುವಿಕೆಗೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು