8:32 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ ಸೊತ್ತು ವಶ; ಇಬ್ಬರ ಬಂಧನ

07/06/2026, 13:15

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಣ್ಣುವಳ್ಳಿ ಗ್ರಾಮದ ಫಾರಂ ಹೌಸ್ ನಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಭೇದಿಸಿದ ಆಗುಂಬೆ ಪೊಲೀಸರು 1 ಲಕ್ಷಕ್ಕೂ ಹೆಚ್ಚಿನ ಮಾಲಿನ ಸಮೇತ ಇಬ್ಬರನ್ನು ಬಂಧಿಸಿದ್ದಾರೆ.
ದಿನಾಂಕ 2-06-2026 ರಂದು ಕಳ್ಳತನ ಪ್ರಕರಣವನ್ನು ಬೇಧಿಸಲು ಹೊರಟ ಆಗುಂಬೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶಿವನಗೌಡ ಪಾಟೀಲ್ ನೇತೃತ್ವದ ತಂಡ 7 ಮೊಬೈಲ್ ಫೋನ್‌ಗಳು ಅಂದಾಜು ಮೌಲ್ಯ 1,41,000/- ರೂ ಗಳು ಹಾಗೂ ಕೃತ್ಯಕ್ಕೆ ಬಳಸಿದ ಕೆಎ 14 ಇಡಿ 7699 ಕಪ್ಪು ಬಣ್ಣದ ಪಲ್ಸರ್ ಬೈಕ್ ಅಂದಾಜು ಮೌಲ್ಯ -30,000/- ರೂ ಗಳು ಸೇರಿ ಒಟ್ಟು 1 ಲಕ್ಷದ 71 ಸಾವಿರ ರೂ ಗಳ ಮಾಲು ಹಾಗೂ ಇಬ್ಬರನ್ನು ತಮ್ಮ ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ಆರೋಪಿಗಳಾದ ಭದ್ರಾವತಿ ತಾಲೂಕಿನ ಹೊಸಮನೆಯ 34 ವರ್ಷದ ಬಾಲರಾಜ್@ ಕಿರಣ ಬಿನ್ ಜಾನ್
ಹಾಗೂ 20 ವರ್ಷದ ಹರ್ಷ ಬಿನ್ ಮಂಜ ಇಬ್ಬರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಆಗುಂಬೆ ಪೋಲೀಸರ ಈ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು