6:24 AM Sunday23 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್!

05/05/2026, 20:34

ಬೆಂಗಳೂರು(reporterkarnataka.com): ಸಚಿವ ಜಮೀರ್ ಅಹ್ಮದ್ ಖಾನ್ ನಿವಾಸದಲ್ಲಿ ಚಿನ್ನಾಭರಣ ಕದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಶಿವಾಜಿನಗರ ಠಾಣೆ ಪೋಲೀಸರು ಇದೀಗ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಬಂಧಿತ ಆರೋಪಿಗಳನ್ನು ಸಯ್ಯದ್ ಅಮೀರ್ ಹಾಗೂ ಅಮೀರ್ ಅಹ್ಮದ್ ಎಂದು ತಿಳಿದು ಬಂದಿದೆ. ಬಿಜಿನೆಸ್ ಲಾಸ್ ಆಗಿದ್ದಕ್ಕೆ ಪರಿಚಯಸ್ಥರಿಂದಲೇ ಕಳ್ಳತನ ಮಾಡಿದ್ದಾರೆ. ಸೈಯದ್ ಜೊತೆಗೆ ಅಮೀರ್ ಅಹ್ಮದ್ ಟ್ರಾವೆಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದ. ಜಮೀರ್ ಮನೆಯಲ್ಲಿ ಸಯ್ಯದ್ ಮತ್ತು ಅಮೀರ್ ಇಬ್ಬರು ಕಳ್ಳತನ ಮಾಡಿದ್ದರು. ಮನೆಯಲ್ಲಿ ಬಂದು ಚಿನ್ನಾಭರಣ ಕಳ್ಳತನ ಮಾಡಿದ್ದರು. ಜಮೀರ್ ತಾಯಿಯ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಗಳು, 1.13 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದರು.
ಚಿನ್ನ ಕಳ್ಳತನ ಮಾಡಿ ಆಭರಣ ಅಡವಿಟ್ಟು ಆರೋಪಿಗಳು ಹಣ ಪಡೆದಿದ್ದರು. ಆ ಹಣವನ್ನು ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಮಾಡಿ ಲಾಭಕ್ಕೆ ಪ್ಲಾನ್ ಮಾಡಿದರು. ಕಾಲ್ ಮಾಡಿದಾಗ ರಿಸೀವ್ ಮಾಡಲಿಲ್ಲ. ಇಬ್ಬರ ಮೇಲೆ ಅನುಮಾನ ವ್ಯಕ್ತವಾಗಿದೆ. ಸದ್ಯ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು