2:56 AM Friday19 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಥಲೆಸ್ಸೀಮಿಯ ಕಾಯಿಲೆಯಿಂದ ಬಳಲುತ್ತಿರುವ ಬಾಲಕನಿಗೆ ಬೇಕು ನಿಮ್ಮೆಲ್ಲರ ನೆರವಿನ ಹಸ್ತ: ಸಹಾಯ ಮಾಡುವಿರಾ?

20/07/2022, 20:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ

ಕೂವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂವೆ ಗ್ರಾಮದ ಬೀರ್ಗೂರು ದಿವಾಕರ ಹಾಗೂ ಶಾಲಿನಿ ದಂಪತಿ ಪುತ್ರ ರಿತ್ವಿಕ್ ಅಪರೂಪದ ಥಲೆಸ್ಸೀಮಿಯ ಕಾಯಿಲೆಯಿಂದ ಬಳಲುತ್ತಿದ್ದು, ಉದಾರ ದಾನಿಗಳ ನೆರವಿನ ಹಸ್ತ ಬೇಕಾಗಿದೆ.

ಪ್ರಸ್ತುತ 1ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಲವಲವಿಕೆಯಿಂದಲೇ ಇದ್ದ. ಆದರೆ ಬಾಲಕ ಕಳೆದ ಎರಡುವರೆ ತಿಂಗಳ ಹಿಂದೆ ಇದ್ದಕ್ಕಿದ್ದಂತೆ ದೈಹಿಕ ಚಟುವಟಿಕೆ ಕಡಿಮೆ ಮಾಡ ತೊಡಗಿದ.

ನಿರಾಸಕ್ತಿಯೊಂದಿಗೆ ಬಳಲಿ ಕೊನೆಗೆ ಊಟವನ್ನು ಮಾಡಲು ನಿರಾಕರಿಸುವ ಸ್ಥಿತಿಗೆ ತಲುಪಿದ. ಇದನ್ನು ಕಂಡು ಕಂಗಲಾದ ಪೋಷಕರು ಮಂಗಳೂರಿನಲ್ಲಿ ವೈದ್ಯರಲ್ಲಿ ತಪಾಸಣೆ ಮಾಡಿಸಿದಾಗ ಬಾಲಕನಿಗೆ ಥಲೇಸ್ಸಿಮಿಯ ಕಾಯಿಲೆ ಇರುವುದು ಪತ್ತೆಯಾಯಿತು.

ನಂತರ ಪೋಷಕರು ಮಗನ ಚಿಕಿತ್ಸೆಗಾಗಿ ಸಾಕಷ್ಟು ವೆಚ್ಚ ಮಾಡುತ್ತಲೇ ಬಂದರು. ಮಧ್ಯಮ ವರ್ಗದ ಕೃಷಿ ಕುಟುಂಬಸ್ಥರಾದ ಈ ಕುಟುಂಬಕ್ಕೆ ಈಗ ಮಗನ ಬದುಕಿಸಿಕೊಳ್ಳಲು ಸುಮಾರು 40 ಲಕ್ಷದಷ್ಟು ಹಣದ ಅವಶ್ಯಕತೆಯಿದ್ದು ರಿತ್ವಿಕ್ ಬದುಕನ್ನು ಹಸನು ಮಾಡಲು ಮಾನವೀಯ ಹೃದಯಗಳ ಸಹಾಯವನ್ನು ಯಾಚಿಸುತ್ತಿದೆ ಈ ಕುಟುಂಬ.

7 ವರ್ಷಕ್ಕೆ ಅಂಟಿಕೊಂಡ ಕಾಯಿಲೆ: ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ರಿತ್ವಿಕ್ ನೋಡಲು ಲವಲವಿಕೆಯಿಂದ ಇದ್ದರೂ ತಿಂಗಳಾಂತ್ಯಕ್ಕೆ ಈತನಿಗೆ ರಕ್ತ ಕೊಡಿಸಲೇಬೇಕಾಗುತ್ತದೆ. ಇಲ್ಲದಿದ್ದಲ್ಲಿ ಮುಖ ಬಿಳಿಚಿಕೊಳ್ಳುತ್ತದೆ. ಜ್ವರ ಬಂದರೆ ಕಡಿಮೆಯಾಗುವುದೇ ಇಲ್ಲ, ಹೌದು ಬಿಳಿ ರಕ್ತ ಕಣ ಉತ್ಪತ್ತಿಯಾಗದೇ ಇರುವ ಕಾಯಿಲೆಯೆ ಥಲೆಸ್ಸೀಮಿಯಾ .

ಮನುಷ್ಯರ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಶಕ್ತಿ ಇರುವುದು ಬಿಳಿ ರಕ್ತಕಣಗಳಿಗೆ ಮಾತ್ರ, ಈ ಬಿಳಿ ರಕ್ತಕಣಗಳು ಉತ್ಪತ್ತಿಯಾಗದೇ ಇದ್ದರೆ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ ಮತ್ತು ಯಾವುದಾದರೂ ಕಾಯಿಲೆ ಬಂದರೆ ಅದು ಕಡಿಮೆಯಾಗುವುದಿಲ್ಲ. ರಿತ್ವಿಕ್ ದೇಹದಲ್ಲಿ ಇಂತಹ ಬಿಳಿ ರಕ್ತಕಣಗಳ ಉತ್ಪತ್ತಿ ನಿಂತು ಹೋಗಿದೆ. ಸಾಮಾನ್ಯ ಜ್ವರ ಬಂದರೂ ಕೂಡ ಮೆದುಳಿಗೆ ಹತ್ತಿಕೊಳ್ಳುತ್ತದೆ. ಇದೀಗ ತಿಂಗಳಿಗೆ ಎರಡು ಬಾರಿ ರಕ್ತ ಕೊಡಿಸಲು ಮಂಗಳೂರಿಗೆ ಹೋಗಿಬರುತ್ತಿದ್ದು, ಇತನಿಗೆ ಅಂಟಿದ ಕಾಯಿಲೆ ದೂರವಾಗಬೇಕಾದರೆ ಮೂಳೆ ಮಜ್ಜೆಯ ಕಸಿ ಶಸ್ತ್ರ ಚಿಕಿತ್ಸೆ ( ಬೋನ್ ಮ್ಯಾರೋ ಟ್ರಾನ್ಸ್ ಪ್ಲೇಟೇಶನ್) ಯಿಂದ ಸಾಧ್ಯ ಎಂದಿದ್ದಾರೆ ಬೆಂಗಳೂರಿನ ವೈದ್ಯರು. ಆದರೆ ಇದಕ್ಕೆ 40 ಲಕ್ಷಗಳಷ್ಟು ಖರ್ಚು ಇದೆ ಎಂದಿದ್ದಾರೆ ಎನ್ನುತ್ತಾರೆ ದಿವಾಕರ್ . ಆದರೆ ಇವರಿಗೆ ಇಷ್ಟೊಂದು ಹಣವನ್ನು ಹೊಂದಿಸುವುದು ಕಷ್ಟವಾಗಿದ್ದು ಈಗಾಗಲೇ ಸಾಕಷ್ಟು ಹಣ ಖರ್ಚು ಮಾಡಿರುತ್ತಾರೆ. ಆದ್ದರಿಂದ ಸಹೃದಯಿ ಬಂಧುಗಳು ತಮ್ಮ ಕೈಯಲ್ಲಾದ ಸಹಾಯ ಮಾಡಿ ತಮ್ಮ ಮಗನಿಗೆ ಅಂಟಿದ ಕಾಯಿಲೆಯನ್ನು ಗುಣ ಮಾಡಲು ನೆರವಾಗಿ ಎಂದು ಕೇಳಿಕೊಂಡಿದ್ದಾರೆ.

ಸಹಾಯ ಮಾಡುವವರು ರಿತ್ವಿಕ್ ರವರ ತಂದೆ ದಿವಾಕರ ಅವರ ಹೆಸರಿಲ್ಲಿರುವ ಕೆನರಾ ಬ್ಯಾಂಕ್ ಬನ್ನೂರು ಶಾಖೆಯ ಖಾತೆ ಸಂಖ್ಯೆ 5391101001255 ಕ್ಕೆ ಅಥವಾ 6363924671 ಮೊಬೈಲ್ ಸಂಖ್ಯೆಗೆ ಪೋನ್ ಪೇ / ಗೂಗಲ್ ಪೇ ಮೂಲಕ ಸಹಾಯ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ಮೊ. 6363924671 ಗೆ ಕರೆ ಮಾಡಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು