ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ
02/07/2025, 23:13

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮುಖ್ಯಮಂತ್ರಿ ಬದಲಾವಣೆ ಕುರಿತು ರಾಜ್ಯ ರಾಜಕಾರಣ ದಲ್ಲಿ ಕೇಳಿ ಬರುತ್ತಿರುವ ಚರ್ಚೆ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿ ಎಂಬುದು ಕೇವಲ ಊಹಾಪೋಹ ಮತ್ತು ಸತ್ಯಕ್ಕೆ ದೂರವಾದದ್ದು ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಸ್ಪಷ್ಟಪಡಿಸಿದ್ದಾರೆ.
140 ಶಾಸಕರ ಪೈಕಿ ಕೇವಲ ಒಂದಿಬ್ಬರು ಮಾತನಾಡಿದ್ದಾರೆ..
ಅದನ್ನೇ ನಾಯಕತ್ವ ಬದಲಾವಣೆಯ ಕೂಗು ಎಂದು ಪರಿಗಣಿಸುವುದು ಸಮಂಜಸವಲ್ಲ. ಆಡಳಿತಾತ್ಮಕ ಗೊಂದಲಗಳನ್ನು ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಬಗೆಹರಿಸುತ್ತಾರೆ. ಸಾಂಸ್ಥಿಕ ಶಿಸ್ತನ್ನು ಎಲ್ಲಾ ಶಾಸಕರುಗಳು ಪಾಲಿಸಬೇಕು ಎಂದು ಅವರು ತಿಳಿಸಿದರು.
ಎ.ಎಸ್. ಪೊನ್ನಣ್ಣ ಮಾಧ್ಯಮಕ್ಕೆ ತಿಳಿಸಿದ್ದಾರೆ.