8:11 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ನನ್ನ ಮತ್ತು ಡಿ. ಕೆ. ಶಿವಕುಮಾರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಮುಂದೆಯೂ ಇರಲ್ಲ: ಸಿಎಂ ಸಿದ್ದರಾಮಯ್ಯ

29/11/2025, 16:36

ಬೆಂಗಳೂರು(reporterkarnataka.com): ನನ್ನ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಮುಂದೆಯೂ ಇರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತೀವ್ರ ಕುತೂಹಲ ಕೆರಳಿಸಿದ ಇಂದಿನ ಬ್ರೇಕ್ ಫಾಸ್ಟ್ ಮೀಟಿಂಗ್ ನಂತರ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸಿಎಂ ಮತ್ತು ಡಿಸಿಎಂ ಡಿ. ಕೆ. ಶಿವಕುಮಾರ್ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದರು.


ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬ್ರೇಕ್ ಫಾಸ್ಟ್ ಚೆನ್ನಾಗಿತ್ತು, ನಾನು ಡಿ. ಕೆ. ಶಿವಕುಮಾರ್, ಪೊನ್ನಣ್ಣ ಬ್ರೇಕ್ ಫಾಸ್ಟ್ ಮಾಡಿದ್ವಿ. ಮೊನ್ನೆನೇ ಹೈಕಮಾಂಡ್ ಫೋನ್ ಮಾಡಿದ್ದರು. ಡಿ. ಕೆ. ಶಿವಕುಮಾರ್ ಇವತ್ತು ನಮ್ಮನೆಗೆ ಬಂದರು. ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಕರೆದಿದ್ದೆ. ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಯಿತು, ಅದನ್ನು ಬಗೆಹರಿಸಲು ಇಂದು ಕರೆದಿದ್ದೆ ಎಂದರು.
ನಮ್ಮ ಉದ್ದೇಶ 2028ರ ವಿಧಾನಸಭೆ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವುದು,ನನ್ನ ಮತ್ತು ಶಿವಕುಮಾರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು