2:06 AM Thursday17 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟನೆ

29/03/2026, 22:05

ಬೆಂಗಳೂರು (reporterkarnataka.com): ಎಲ್ಲ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್ ಪಿಜಿಗೆ ಯಾವುದೇ ರೀತಿಯ ‌ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಎಲ್‌ಪಿಜಿ ಸರಬರಾಜು ವ್ಯವಸ್ಥೆಯನ್ನು, ವಿಶೇಷವಾಗಿ ಆಟೋ ಎಲ್‌ಪಿಜಿ ಪೂರೈಕೆಯನ್ನು ರಾಜ್ಯ ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ. ಕರ್ನಾಟಕದಾದ್ಯಂತ ಒಟ್ಟು 72 ಆಟೋ ಎಲ್‌ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು (ALDS) ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಕೇವಲ ಬೆಂಗಳೂರು ನಗರವೊಂದರಲ್ಲೇ 31 ಕೇಂದ್ರಗಳು ಲಭ್ಯವಿವೆ.
ಸಾರ್ವಜನಿಕ ವಲಯದ ಪ್ರಮುಖ ತೈಲ ಮಾರಾಟ ಕಂಪನಿಗಳಾದ (OMCs) IOCL, BPCL ಮತ್ತು HPCL ಮೂಲಕ ಆಟೋ ಎಲ್‌ಪಿಜಿ ಸರಬರಾಜು ಮಾಡಲಾಗುತ್ತಿದೆ. ಪ್ರಸ್ತುತ ಈ ಸಂಸ್ಥೆಗಳು ಪ್ರತಿ ಲೀಟರ್‌ಗೆ ರೂ. 77.74 ರ ದರದಲ್ಲಿ ಆಟೋ ಎಲ್‌ಪಿಜಿ ಪೂರೈಸುತ್ತಿವೆ.
ಕಳೆದ ವಾರದಲ್ಲಿ ದಿನಕ್ಕೆ ಸರಾಸರಿ 64.9 ಮೆಟ್ರಿಕ್ ಟನ್ ಆಟೋ ಎಲ್‌ಪಿಜಿಯನ್ನು ವಿತರಿಸಲಾಗಿದೆ. ಸಂಘರ್ಷದ ಮೊದಲು ಈ ಪ್ರಮಾಣವು ದಿನಕ್ಕೆ 57.6 ಮೆಟ್ರಿಕ್ ಟನ್ ಇತ್ತು. ಇದು ಪೂರೈಕೆಯಲ್ಲಿನ ಗಮನಾರ್ಹ ಹೆಚ್ಚಳವನ್ನು ತೋರಿಸುತ್ತದೆ.
ರಾಜ್ಯದಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಹಾಗೂ ಸುಮಾರು 18,000 ವಾಣಿಜ್ಯ ಬಳಕೆ ಸಿಲಿಂಡರ್‌ಗಳನ್ನು ಪೂರೈಕೆ ಮಾಡಲಾಗುತ್ತಿದೆ.
​ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು ಆಗುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವು ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ‌ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು