12:53 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ: ಸಿಎಂ ಡಿಕೆಶಿಗೆ ಕೆ.ಎನ್.ರಾಜಣ್ಣ ಕೌಂಟರ್

05/06/2026, 19:03

ಬೆಂಗಳೂರು(reporterkarnataka.com):ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡು ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಬೆನ್ನಲ್ಲೇ ಸಚಿವ ಕೆ.ಹೆಚ್.ಮುನಿಯಪ್ಪ ಕೂಡ ಅಸಮಾಧಾನ ಹೊರ ಹಾಕಿದ್ದಾರೆ. ಇದರಿಂದಾಗಿ ಟ್ರಬಲ್ ಶೂಟರ್ ಎಂದು ಹೆಸರಾಗಿದ್ದ ಡಿ.ಕೆ.ಶಿವಕುಮಾರ್ ಅವರಿಗೇ ಟ್ರಬಲ್ ಶುರುವಾಗಿದೆ ಎಂಬ ಚರ್ಚೆ ಆರಂಭವಾಗಿದೆ.
ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಕೆ.ಎನ್.ರಾಜಣ್ಣ, ರಾಮಲಿಂಗಾರೆಡ್ಡಿ ಜಲಸಂಪನ್ಮೂಲ ಖಾತೆ ತನಗೆ ಬೇಡ. ನಗರಾಭಿವೃದ್ಧಿ ಖಾತೆ ನೀಡುವಂತೆ ಕೇಳಿದ್ದರು. ಆದರೆ ಅವರು ಕೇಳಿದ ಖಾತೆ ಸಿಕ್ಕಿಲ್ಲ. ಹಾಗಾಗಿ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲ್ಲ ಎಂದು ರಾಜೀನಾಮೆ ಕೊಟ್ಟಿದ್ದಾರೆ ಎಂದರು.
ಟ್ರಬಲ್ ಶೂಟರ್ ಗೆ ಟ್ರಬಲ್ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ರಾಜಣ್ಣ, ಯಾವ ಟ್ರಬಲ್ ಶೂಟರೂ ಇಲ್ಲ. ಅದೆಲ್ಲವೂ ಮಾಧ್ಯಮಗಳ ಸೃಷ್ಟಿ. ಟ್ರಬಲ್ ಶೂಟರ್ ಆಗಿದ್ದರೆ ಅಸ್ಸಾಂ ಗೆ ಹೋಗಿ ಯಾಕೆ ಟ್ರಬಲ್ ಶೂಟ್ ಮಾಡಿಲ್ಲ? ಎಂದು ಪ್ರಶ್ನಿಸಿದರು. ಸುಮ್ಮನೇ ಏಣೀ ಹೇಳುವುದಲ್ಲ ಎಂದರು.
ಈಗ ಈಶ್ವರ ಖಂಡ್ರೆ ಅವರಿಗೂ ಖಾತೆ ಬದಲಾಗಿದೆ. ಪರಮೇಶ್ವರ್ ಅವರಿಗೂ ಖಾತೆ ಬದಲಾಗಿದೆ. ಯಾರ ಆಸ್ತಿ ಯಾರಪ್ಪನ ಸ್ವತ್ತಲ್ಲ. ಬದಲಾದ ಸನ್ನಿವೇಶಗಳಿಗೆ ಅನುಗುಣವಾಗಿ ಅವಕಾಶಗಳು ದೊರೆಯುತ್ತವೆ. ಅವಕಾಶ ಸಿಕ್ಕಾಗ ಅವರು ತಮ್ಮ ಬುದ್ಧಿಶಕ್ತಿ ಉಪಯೋಗಿಸಿ ಜನಪರವಾದ ಕೆಲಸಗಳನ್ನು ಮಾಡಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು