10:42 AM Sunday14 - December 2025
ಬ್ರೇಕಿಂಗ್ ನ್ಯೂಸ್
ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್…

ಇತ್ತೀಚಿನ ಸುದ್ದಿ

ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

14/12/2025, 10:42

ಹುಬ್ಬಳ್ಳಿ(reporterkarnataka.com): ಕೈಯಲ್ಲಿ ಸಂವಿಧಾನ ಪ್ರತಿ ಹಿಡಿದು ಓಡಾಡುವ ಕಾಂಗ್ರೆಸ್ಸಿಗರು ಸಂವಿಧಾನವನ್ನೇ ಗಾಳಿಗೆ ತೂರುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ‌ಜೋಶಿ‌ ಹರಿ ಹಾಯ್ದರು.
ಹುಬ್ಬಳ್ಳಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷ ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಗೆ ಗೌರವ ತೋರುವುದಿಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಲೇ ಇದೆ ಎಂದು ಟೀಕಿಸಿದರು.
ತಮಿಳುನಾಡಿನ ತಿರುಪಕುಂದ್ರಂ ಬೆಟ್ಟದಲ್ಲಿ ದೀಪ ಹಚ್ಚುವ ಕುರಿತು ತೀರ್ಪಿತ್ತ ಮದ್ರಾಸ್‌ ಹೈಕೋರ್ಟ್‌ ನ್ಯಾಯಮೂರ್ತಿ ವಿರುದ್ಧ ಇಂಡಿಯಾ ಒಕ್ಕೂಟ ಅವರ ಪದಚ್ಯುತಿಗೆ ನಿರ್ಣಯ ಕೈಗೊಂಡಿರುವುದು ನ್ಯಾಯಾಂಗ ವ್ಯವಸ್ಥೆಗೆ ಧಮಕಿ ಹಾಕಿದಂತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತುಷ್ಟೀಕರಣದ ಪರವಾಗಿ ತೀರ್ಪು ಬಂದಿಲ್ಲ ಎಂಬ ಕಾರಣಕ್ಕೆ ನ್ಯಾಯಾಧೀಶರ ಮೇಲೆ ಕ್ರಮಕ್ಕೆ ಒತ್ತಡ ಯಾವ ನ್ಯಾಯ? ಎಂದು ಪ್ರಶ್ನಿಸಿದ ಜೋಶಿ, ನ್ಯಾಯಾಂಗದಲ್ಲಿ ಮೇಲ್ಮನವಿಗೆ ಅವಕಾಶವಿದೆ. ಅದು ಬಿಟ್ಟು ನ್ಯಾಯಾಧೀಶರನ್ನೇ ಪದಚ್ಯುತಿ ಮಾಡಬೇಕು ಎನ್ನುವುದು ಮೂರ್ಖತನದ ಪರಮಾವಧಿ ಎಂದು ಖಂಡಿಸಿದರು.

ನ್ಯಾಯಾಧೀಶರು ಭ್ರಷ್ಟಾಚಾರಿಗಳಾದರೆ ಅಥವಾ ಈ ಸ್ಥಾನವನ್ನು ದುರುಪಯೋಗ ಮಾಡಿಕೊಂಡರೆ ಪದಚ್ಯುತಿಗೆ ಒತ್ತಾಯ ಸಹಜ. ಆದರೆ ಇವರದ್ದು ವ್ಯತಿರಿಕ್ತ ವೇದಿಕೆಯಾಗಿದೆ ಎಂದು ಆರೋಪಿಸಿದರು.

ಇತಿಹಾಸ ಎನ್ನುವಂತೆ ಕಾಂಗ್ರೆಸ್ಸಿಗರು ನ್ಯಾಯಾಧೀಶರ ಪದಚ್ಯುತಿಗೆ ಸಹಿ ಮಾಡುತ್ತಿದ್ದಾರೆ. ಇವರು ನ್ಯಾಯಾಂಗ ವ್ಯವಸ್ಥೆಗೆ ಕೊಡುವ ಗೌರವ ಇದೇನಾ? ಎಂದು ವಾಗ್ದಾಳಿ ನಡೆಸಿದರು.

ಭವಿಷ್ಯದಲ್ಲಿ ಭಾರತ ಕಾಂಗ್ರೆಸ್ ಮುಕ್ತ ದೇಶವಾಗುತ್ತಿದೆ. ಹಾಗಿದ್ದರೂ ಕಾಂಗ್ರೆಸ್ ನಾಯಕರ ವರ್ತನೆ ಬದಲಾಗುತ್ತಿಲ್ಲ. ಕೋರ್ಟ್​ನಲ್ಲಿ ಅವರ ಪರವಾಗಿ ತೀರ್ಪು ಬಂದರಷ್ಟೇ ನ್ಯಾಯಾಂಗವನ್ನು ಒಪ್ಪುತ್ತಾರೆ. ಇಲ್ಲದಿದ್ದರೆ ನ್ಯಾಯಾಂಗ ಮತ್ತು ಸಂವಿಧಾನ ವ್ಯವಸ್ಥೆಯನ್ನೇ ದೂರುತ್ತಾರೆ. :ಬಹುಶಃ ಇವರಿಗೆ ತಾವೇ ಹೇಳಿದಂತೆ ಕೇಳುವ ನ್ಯಾಯಾಧೀಶರು ಬೇಕಿದೆ’ ಎಂದು ಜೋಶಿ ಟೀಕಿಸಿದರು.

ಕಾಂಗ್ರೆಸ್ ಪಕ್ಷ ಬ್ರಿಟಿಷರಂತೆ ಧಮನಕಾರಿ ಪ್ರವೃತ್ತಿಯನ್ನು ಪ್ರದರ್ಶಿಸುತ್ತಿದೆ. ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ಬದಲು ತಮ್ಮ ವಿರುದ್ಧ ಮಾತನಾಡುವವರನ್ನು ಕಾಯ್ದೆ ನೆಪದಲ್ಲಿ ಹಣಿಯಲು ನೋಡುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಅಭಿವೃದ್ಧಿ ಅಲ್ಲ, ಬರೀ ನಾಟಿ‌‌ಕೋಳಿ ಮೆನು ಬಗ್ಗೆಯೇ ಹೆಚ್ಚು ಚರ್ಚೆ ಆಗುತ್ತಿದೆ. ರಾಜಕೀಯ ಅಸ್ಥಿರತೆ, ದ್ವೇಷ ರಾಜಕಾರಣದಿಂದ ಕರ್ನಾಟಕದ ಆರ್ಥಿಕ ಪರಿಸ್ಥಿತಿಯೂ ಗಂಭೀರ ಸ್ವರೂಪ ತಾಳಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜನೌಷಧಿ ಕೇಂದ್ರ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಕಪಾಳಮೋಕ್ಷ ಮಾಡಿದೆ ಎಂದ ಜೋಶಿ, ಕಾಂಗ್ರೆಸ್ ಸಹವಾಸದಿಂದ ಇಂಡಿ ಒಕ್ಕೂಟದ ಕೆಲ ಮಿತ್ರ ಪಕ್ಷಗಳು ದೂರ ಸರಿಯುತ್ತಿವೆ ಎಂದು ಹೇಳಿದರು.

ವೋಟ್ ಚೋರಿ ಬಗ್ಗೆ ಇಂಡಿ ಒಕ್ಕೂಟದ ಸದಸ್ಯರೇ ಅಲ್ಲಗಳೆಯುತ್ತಿದ್ದಾರೆ. ಆಳಂದಲ್ಲಿ ವೋಟ್ ತೆಗೆದೇ ಇಲ್ಲ. ಇದೆಲ್ಲ ರಾಹುಲ್ ಗಾಂಧಿ ಕಪೋಕಲ್ಪನೆ. ರಾಹುಲ್ ಗಾಂಧಿ ಮೆಚ್ಚಿಸಲು ಎಸ್​ಐಟಿಯನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ. ಯಾವುದೇ ಅರ್ಜಿ ಬಂದರೂ ತನಿಖೆ ನಡೆಸಿ ನೋಟಿಸ್ ನೀಡುವುದು ಸಹಜ ಎಂದು ಹೇಳಿದರು

*ಪ್ರತ್ಯೇಕ ರಾಜ್ಯ ನಿರರ್ಥಕ:* ಯಾವುದೇ ಕಾರಣಕ್ಕೂ ಕರ್ನಾಟಕವನ್ನು ಒಡೆಯಬಾರದು. ಬಿಜೆಪಿ ಕರ್ನಾಟಕವನ್ನು ಒಡೆಯುತ್ತಿಲ್ಲ. ಆರ್ಥಿಕ ಅಸಮಾನತೆ ಮತ್ತು ರಸ್ತೆ ಅಭಿವೃದ್ಧಿಗೆ ಹಣ ಕೊಡುತ್ತಲೇ ಇಲ್ಲ ಇವರು ಎಂದು ಟೀಕಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು