8:58 PM Wednesday12 - November 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

ಇತ್ತೀಚಿನ ಸುದ್ದಿ

ಬಿಹಾರ ಚುನಾವಣೆ ಫಲಿತಾಂಶ ಬಂದ ಬಳಿಕ ಮತಗಳ್ಳತನದ ಆರೋಪ ಮಾಡುತ್ತಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

12/11/2025, 20:43

ಬೆಂಗಳೂರು(reporterkarnataka.com): ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ರಾಹುಲ್‌ ಗಾಂಧಿ ಮತಗಳ್ಳತನ ಆರೋಪ ಮಾಡುವುದು ಖಂಡಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ ಚುನಾವಣೆ ಪ್ರತಿಷ್ಠಿತ ಚುನಾವಣೆಯಾಗಿದೆ. ಬಿಹಾರದಲ್ಲಿ ನಕ್ಸಲ್‌ ಚಟುವಟಿಕೆ ಹೆಚ್ಚಿದ್ದರೂ ಈ ಬಾರಿ ಉತ್ತಮವಾಗಿ ಮತದಾನ ನಡೆದಿದೆ. ಅಮಿತ್‌ ಶಾ ಗೃಹ ಸಚಿವರಾದ ಬಳಿಕ ನಕ್ಸಲ್‌ ಚಟುವಟಿಕೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. 12 ಕ್ಕೂ ಹೆಚ್ಚು ಸಂಸ್ಥೆಗಳು ಸಮೀಕ್ಷೆ ಮಾಡಿದ್ದು, ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಲಾಗಿದೆ. ಕಾಂಗ್ರೆಸ್‌ನ ಘಟಬಂಧನಕ್ಕೆ ಬೆಂಬಲ ಇಲ್ಲ ಎಂದು ಹೇಳಲಾಗಿದೆ ಎಂದರು.
ಬಿಹಾರ ಚುನಾವಣೆಯ ಫಲಿತಾಂಶ ಬಂದ ಬಳಿಕ ರಾಹುಲ್‌ ಗಾಂಧಿ ಮತಗಳ್ಳತನದ ಆರೋಪ ಮಾಡುತ್ತಾರೆ. ರಾಹುಲ್‌ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್‌ ಸರಣಿಯಾಗಿ ಸೋಲುತ್ತಿದೆ. ಲೋಕಸಭೆ, ವಿಧಾನಸಭಾ ಚುನಾವಣೆಗಳಲ್ಲಿ ರಾಹುಲ್‌ ಗಾಂಧಿ ಐರನ್‌ ಲೆಗ್‌ ಎಂದು ಪ್ರಸಿದ್ಧಿ ಪಡೆದಿದ್ದಾರೆ. ಬಿಹಾರ ಚುನಾವಣೆಯ ಫಲಿತಾಂಶ ಬಂದ ನಂತರ ಅವರು ವಿದೇಶ ಪ್ರವಾಸಕ್ಕೆ ತೆರಳುತ್ತಾರೆ. ಒಂದು ಕಡೆ ಲೋಕಸಭೆಯಲ್ಲೂ ಅವರು ಕೆಲಸ ಮಾಡುತ್ತಿಲ್ಲ, ಮತ್ತೊಂದು ಕಡೆ ಪಕ್ಷಕ್ಕಾಗಿಯೂ ಕೆಲಸ ಮಾಡುತ್ತಿಲ್ಲ ಎಂದರು.
ದೆಹಲಿಯಲ್ಲಾದ ಬಾಂಬ್‌ ಸ್ಪೋಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ಮೊಬೈಲ್‌ ಕೊಟ್ಟಿದ್ದು ಯಾರು ಎಂದು ತನಿಖೆ ಮಾಡಬೇಕಿದೆ ಅಥವಾ ಮೊಬೈಲ್‌ ಬಳಸಿ ಏನು ಮಾಡಿದ್ದಾರೆ ಎಂದು ತನಿಖೆ ಮಾಡಬೇಕಿತ್ತು. ಆದರೆ ಈ ವೀಡಿಯೋ ಹೊರಗೆ ಬಂದಿದ್ದು ಹೇಗೆ ಎಂದು ತನಿಖೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದಂತೆಯೇ ರಾಜ್ಯ ಸರ್ಕಾರ ಕೂಡ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮುಸ್ಲಿಮರ ಪರವಾದ ಮೃದುವಾದ ಧೋರಣೆ ಒಳ್ಳೆಯದಲ್ಲ ಎಂದರು.
ಸಚಿವ ಪ್ರಿಯಾಂಕ್‌ ಖರ್ಗೆ ದೆಹಲಿಯನ್ನು ನೋಡಬೇಕಿಲ್ಲ. ಮಲ್ಲಿಕಾರ್ಜುನ ಖರ್ಗೆ ಗೃಹ ಸಚಿವರಾಗಿದ್ದಾಗ ದಲಿತರನ್ನು ಸುಟ್ಟು ಹಾಕಲಾಗಿತ್ತು. ಆ ಪ್ರಕರಣದಲ್ಲಿ ಖರ್ಗೆಯವರ ವಿಫಲತೆಯನ್ನು ಇವರು ಮೊದಲು ನೋಡಲಿ. ಅಮಿತ್‌ ಶಾ ಬಗ್ಗೆ ಮಾತನಾಡುವ ನೈತಿಕತೆ ಇವರಿಗೆ ಇಲ್ಲ ಎಂದು ಅವರು ನುಡಿದರು.
ಸರ್ಕಾರ ಈಗ ಪಾಪರ್‌ ಆಗಿದೆ. ನೌಕರರಿಗೆ, ಸಿಬ್ಬಂದಿಗೆ ಸಂಬಳ ಕೊಡಲು ಆಗುತ್ತಿಲ್ಲ ಎಂದರು.

*ಖರೀದಿ ಕೇಂದ್ರ ಆರಂಭಿಸಿ:*
ರಾಜ್ಯಾದ್ಯಂತ ಮೆಕ್ಕೆಜೋಳ ಬೆಳೆದ ರೈತರಿಗೆ ಬೆಂಬಲ ಬೆಲೆ ನೀಡಿ ಖರೀದಿಸಲು ರೈತರು ಬೇಡಿಕೆ ಇಟ್ಟಿದ್ದಾರೆ. ಆದರೆ ರೈತ ವಿರೋಧಿ ಸರ್ಕಾರ ಒಂದೇ ಒಂದು ಖರೀದಿ ಕೇಂದ್ರ ತೆರೆದಿಲ್ಲ. ಕಾಲಾಹರಣ ಮಾಡದೆ ಕೂಡಲೇ ಖರೀದಿ ಆರಂಭಿಸಬೇಕು, ಇಲ್ಲದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಈರುಳ್ಳಿ ಬೆಳೆಗಾರರು ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ. ಮಾರುಕಟ್ಟೆಯಲ್ಲಿ ಸಿಗುತ್ತಿರುವ ದರ ಕಳೆ ಕೀಳಿಸಿದ ಕೂಲಿಯ ಹಣ ಗಿಟ್ಟುತ್ತಿಲ್ಲ.
ಇಂತಹ ಸ್ಥಿತಿಯಲ್ಲಿ ನೆರವಿಗೆ ಧಾವಿಸಿ ಈರುಳ್ಳಿ ಖರೀದಿಸಲು ಕ್ರಮ ಕೈಗೊಳ್ಳಬೇಕಿದ್ದ ಸರ್ಕಾರ ಮೀನಾ ಮೇಷ ಎಣಿಸುತ್ತಿದೆ. ಮಾತಿಗೊಮ್ಮೆ ತಮ್ಮದು ರೈತ ಪರ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಬೆನ್ನು ತಟ್ಟಿಕೊಳ್ಳುತ್ತಾರೆ, ಇದೇನಾ ರೈತರ ಪರವಾದ ಕಾಳಜಿ ಎಂದು ವ್ಯಗ್ಯವಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು