3:07 AM Sunday4 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಬಂಟ್ವಾಳ ಬಸ್ ನಲ್ಲಿ ಕಳ್ಳರ ಕೈಚಳಕ: ಪ್ರಯಾಣಿಕ ಮಹಿಳೆ ಪರ್ಸ್ ನಿಂದ 6.24 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

28/04/2026, 21:16

ಬಂಟ್ವಾಳ(reporterkarnataka.com): ಬಂಟ್ವಾಳದ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೋರ್ವರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಇರಿಸಿದ್ದ ಪರ್ಸ್ ಕಳವಾದ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಾಗೆಕಾನ ನಿವಾಸಿ ಕ್ರಿಸ್ತಿನ್ ವೇಗಸ್ ಅವರ ಪರ್ಸ್ ಕಳವಾಗಿದೆ. ಪರ್ಸ್ ನಲ್ಲಿ ಐದೂವರೆ ಪವನ್ ತೂಕದ ಚಿನ್ನದ ಕರಿಮಣಿ ಸರ ಮತ್ತು ನಾಲ್ಕು ಗ್ರಾಂ ತೂಕದ ಚಿನ್ನದ ಉಂಗುರ ಸೇರಿ ಒಟ್ಟು 48 ಗ್ರಾಂ ತೂಕದ ಚಿನ್ನಾಭರಣ ಇತ್ತು. ಇದರ ಅಂದಾಜು ಮೌಲ್ಯ 6,24,000 ರೂ. ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಗಂಡನ ಜತೆ ಉಜಿರೆಯಲ್ಲಿ ಸಂಬಂಧಿಕರ ಮೆಹಂದಿ ಕಾರ್ಯಕ್ರಮಕ್ಕೆ ಹೋಗಿ ವಾಪಸು ಮಂಗಳೂರು ಕಡೆಗೆ ಬರುವ ಬಸ್ ನಲ್ಲಿ ಘಟನೆ ಸಂಭವಿಸಿದೆ. ಬಿ.ಸಿ. ರೋಡಿನಲ್ಲಿ ಬಸ್ ಇಳಿದು ನೋಡುವಾಗ ಕಳವಾದ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸರಿಗೆ ಅವರು ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು