ಇತ್ತೀಚಿನ ಸುದ್ದಿ
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ
28/06/2026, 11:35
ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ನೀಡಿದರು.

ದೇಶದ ಆರೋಗ್ಯವಂತ ಭವಿಷ್ಯ ನಮ್ಮ ಮಕ್ಕಳ ಕೈಯಲ್ಲಿದೆ. ಹಾಗಾಗಿ, 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೇ ಪೋಲಿಯೋ ಲಸಿಕೆ ಕೊಡಿಸುವುದು ಪ್ರತಿಯೊಬ್ಬ ಪೋಷಕರ ಆದ್ಯ ಕರ್ತವ್ಯವಾಗಿದೆ. ‘ಎರಡು ಹನಿ ಜೀವ ರಕ್ಷಕ’ ಎಂಬುದನ್ನು ಮನದಟ್ಟು ಮಾಡಿಕೊಂಡು, ಪೋಲಿಯೋ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ನಾವೆಲ್ಲರೂ ಒಟ್ಟಾಗಿ ಕೈಜೋಡಿಸೋಣ ಎಂದು ತಿಳಿಸಿದರು.












