12:20 PM Thursday28 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ: ಅಸಾದಿ ಕೈ ಹಿಡಿದ ಅದೃಷ್ಟ; 2ನೇ ಭಾರಿ ಅಧ್ಯಕ್ಷರಾಗಿ ಆಯ್ಕೆ; ಜೋಡೆತ್ತುಗಳ ಕಾರುಬಾರು!

28/08/2024, 01:52

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ರಹಮತುಲ್ಲಾ ಅಸಾದಿ ಆಯ್ಕೆ ಆಗಿದ್ದಾರೆ. ಕುತೂಹಲ ಮೂಡಿಸಿದ್ದ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಅದೃಷ್ಟ ಅಸಾದಿ ಕೈ ಹಿಡಿದಿದೆ.
ಈ ಹಿಂದೆ ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿದ್ದ ಅಸಾದಿ ಕಳೆದ 20 ವರ್ಷಗಳಿಂದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ಪಟ್ಟಣ ಅಭಿವೃದ್ಧಿಯತ್ತ ಸಾಗುವ ನಿರೀಕ್ಷೆ ಪಟ್ಟಣದ ಸಾರ್ವಜನಿಕರಲ್ಲಿ ಮಾತು ಕೇಳಿ ಬರುತ್ತಿದೆ.
*ಅಧ್ಯಕ್ಷರು ಉಪಾಧ್ಯಕ್ಷರು ಬದಲಾವಣೆ:* ಈ ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಗೀತಾ ರಮೇಶ್ ಈ ಅವಧಿಯಲ್ಲಿ ಉಪಾಧ್ಯಕ್ಷರಾದರೆ ಉಪಾಧ್ಯಕ್ಷರಾಗಿದ್ದ ರಹಮತುಲ್ಲಾ ಅಸಾದಿ ಅಧ್ಯಕ್ಷರಾಗಿ ಬದಲಾವಣೆ ಆಗಿದ್ದಾರೆ.
*ನಾಮಪತ್ರ ಸಲ್ಲಿಸಿದ್ದವರು ಯಾರು?* ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಸೊಪ್ಪುಗುಡ್ಡೆ ರಾಘವೇಂದ್ರ, ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಗಣೇಶ್, ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ರಹಮತುಲ್ಲಾ ಅಸಾದಿ, ಉಪಾಧ್ಯಕ್ಷ ಸ್ಥಾನಕ್ಕೆ ಗೀತಾ ರಮೇಶ್ ನಾಮಪತ್ರ ಸಲ್ಲಿಸಿದ್ದರು.
ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಬಹುಮತ ಇದ್ದ ಕಾಂಗ್ರೆಸ್ ಒಂಬತ್ತು ಮತಗಳಿಂದ ಜಯಭೇರಿ ಭಾರಿಸಿದ್ದು
ಅದೃಷ್ಟ ಅಸಾದಿ ಕೈ ಹಿಡಿದಿದೆ.
*ಜೋಡೆತ್ತುಗಳ ದರ್ಬಾರ್!*
ಕಾಂಗ್ರೆಸ್ ಪಕ್ಷದ ಮುಖಂಡರಾದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಆರ್. ಎಂ. ಮಂಜುನಾಥ್ ಗೌಡರು ಪಟ್ಟಣ ಪಂಚಾಯಿತಿ ಸದಸ್ಯರಿಗೆ ವಿಪ್ ಜಾರಿ ಮಾಡಿ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಸಮೀಪದ ರೆಸಾರ್ಟ್ ಒಂದರಲ್ಲಿ ಎಲ್ಲರನ್ನು ಗೌಪ್ಯವಾಗಿ ಇಟ್ಟುಕೊಂಡು ಚುನಾವಣೆ ಗೆಲ್ಲುವ ಸಲುವಾಗಿ ರೆಸಾರ್ಟ್ ರಾಜಕೀಯಕ್ಕೆ ಹೋಗಿದ್ದರು. ಒಟ್ಟಿನಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಮತ್ತೊಮ್ಮೆ ಜೋಡೆತ್ತುಗಳ ಕೈ ಹಿಡಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು