ಇತ್ತೀಚಿನ ಸುದ್ದಿ
ತೀರ್ಥಹಳ್ಳಿ: ಮನೆಯಲ್ಲಿಯೇ ಯುವಕ ನೇಣಿಗೆ ಶರಣು
09/03/2025, 12:49

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಗುರುವಾರ ಸಂಜೆ ನಡೆದಿದೆ.
ಪಟ್ಟಣದ ಸಮೀಪದ ಕುರುವಳ್ಳಿಯ ಬೊಮ್ಮಸಯ್ಯನ ಅಗ್ರಹಾರದ ಮುರುಳಿ (29 ) ನೇಣಿಗೆ ಶರಣಾದ ದುರ್ಧೈವಿ. ಗುರುವಾರ ಸಂಜೆ ಮನೆಯಲ್ಲಿ ನೇಣು ಹಾಕಿಕೊಂಡಿದ್ದು ಅವರನ್ನು ತಕ್ಷಣವೇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ ಅಷ್ಟರಲ್ಲೆ ಪ್ರಾಣ ಹೋಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.