8:09 AM Thursday28 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ತಿರುವೈಲೋತ್ಸವದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್: ತುಳುನಾಡಿನ ಕಂಬಳದಲ್ಲಿ ಅವರು ಮಾತನಾಡಿದ್ದು ಏನು?

17/02/2024, 21:07

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ನಮ್ಮ ಸಂಸ್ಕೃತಿ ನಮ್ಮ ದೇಶದ ಆಸ್ತಿ. ಈ ಆಸ್ತಿಯನ್ನು ಕಾಪಾಡಿಕೊಂಡು ಬಂದಿರುವ ನಿಮಗೆ ಈಶ್ವರ ಇನ್ನಷ್ಟು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಇದು ತುಳುನಾಡಿನ ಪವಿತ್ರವಾದ ಭೂಮಿ. ಸರ್ವಜನಾಂಗದ ಶಾಂತಿಯ ತೋಟವಾಗಿ ಈ ಭೂಮಿಗೆ ವಿಶೇಷ ಶಕ್ತಿ ಇದೆ. ಇದು ವಿದ್ಯಾ ಕ್ಷೇತ್ರ, ಆರ್ಥಿಕ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಎಲ್ಲಾ ರಂಗದಲ್ಲೂ ಉದ್ಯೋಗ ಸೃಷ್ಟಿಸುವ ಪವಿತ್ರ ಭೂಮಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.



ಅವರು ವಾಮಂಜೂರಿನ ತಿರುವೈಲ್ ಗುತ್ತಿನ ಸಂಕ ಪೂಂಜ- ದೇವು ಪೂಂಜ ಜೋಡುಕರೆ ಕಂಬಳದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಈ ಭೂಮಿಯಲ್ಲಿ ನಮ್ಮ ನಾಡಿನ ಕ್ರೀಡೆಗಳನ್ನು ಉಳಿಸಿಕೊಂಡು ಬೆಳೆಸಿಕೊಂಡು ಬರಲಾಗಿದೆ. ಈ ಭಾಷೆ, ಸಂಸ್ಕೃತಿ ರಾಜ್ಯಕ್ಕೆ ಮೆರುಗು ನೀಡಿದೆ. ನಾನು ಇಂದು ಕಂಬಳ ವೀಕ್ಷಣೆ ಮಾಡಿ, ಇದರ ಅಭಿಮಾನಗಳಿಗೆ, ಆಯೋಜಕರು, ಪ್ರೋತ್ಸಾಹ ನೀಡುವವರಿಗೆ ಶುಭ ಹಾರೈಸಿ ನಿಮ್ಮ ಜತೆ ಸರ್ಕಾರ ಇದೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ ಎಂದರು.
ಈ ವರ್ಷ ನಾನು ಉಪಮುಖ್ಯಮಂತ್ರಿಯಾಗಿ ಬೆಂಗಳೂರಿನ ಜವಾಬ್ದಾರಿ ವಹಿಸಿಕೊಂಡ ನಂತರ ಇದನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಈ ಪ್ರೋತ್ಸಾಹವನ್ನು ನಾವು ಸದಾ ಮುಂದುವರಿಸುತ್ತೇವೆ. ಈ ಕಂಬಳ ಕ್ರೀಡೆ ದೇಶಕ್ಕೆ ಹಿರಿಮೆಯಾಗಿದೆ. ವಿಶ್ವಮಟ್ಟದಲ್ಲಿ ಈ ಕ್ರೀಡೆ ಗುರುತಿಸಿಕೊಳ್ಳಬೇಕು ಎಂದು ನಾವು ಬಯಸುತ್ತಿದ್ದು, ಇದಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ನೀಡಲು ನಾನು ಬದ್ಧ ಎಂದು ಡಿಸಿಎಂ ನುಡಿದರು.
ನಿಮ್ಮ ಸರ್ಕಾರ ನಿಮ್ಮ ಜತೆ ಇರಲಿದೆ. ಇದನ್ನು ಉಳಿಸಿ ಬೆಳೆಸಿ. ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಕೋರುತ್ತೇನೆ ಎಂದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ,ಇನಾಯತ್ ಅಲಿ, ಮಂಗಳೂರು ಮಹಾನಗರಪಾಲಿಕೆ ಪ್ರತಿಪಕ್ಷದ ನಾಯಕ,ತಿರುವೈಲುಗುತ್ತಿನ ಪ್ರವೀಣ್ ಚಂದ್ರ ಆಳ್ವ,ನವೀನ್ ಚಂದ್ರ ಆಳ್ವ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾಯೋಜನೆ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು