9:33 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಇದು ಆಡಳಿತವಲ್ಲ, ಸಂಘಟಿತ ಲೂಟಿ: ಸಿಲಿಂಡರ್ ದರ ಏರಿಕೆ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

02/05/2026, 20:28

ಬೆಂಗಳೂರು(reporterkarnataka.com): ದೇಶಾದ್ಯಂತ ಕಮರ್ಷಿಯಲ್ ಸಿಲಿಂಡರ್ ದರ ಏರಿಕೆ ವಿಚಾರ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ರಾಜ್ಯದ ಹೋಟೆಲ್ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇದು ಆಡಳಿತವಲ್ಲ, ಇದು ಸಂಘಟಿತ ಲೂಟಿ. ಚುನಾವಣೆಯ ಸಮಯದಲ್ಲಿ ಜನರನ್ನು ದಾರಿ ತಪ್ಪಿಸುವುದು ಮತ್ತು ನಂತರ ಅವರ ಮೇಲೆ ಹೊರೆ ಹಾಕುವುದು ಪ್ರಧಾನಿ ನರೇಂದ್ರ ಮೋದಿ ಮಾದರಿ ಎಂದು ಸಿಎಂ ವಾಗ್ದಾಳಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನಾವು ಮೊದಲೇ ಎಚ್ಚರಿಸಿದಂತೆ, ಚುನಾವಣೆಗಳು ಮುಗಿಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಮತ್ತೊಮ್ಮೆ ಬೆಲೆಯನ್ನು ಏರಿಕೆ ಮಾಡಿದೆ. ಚುನಾವಣೆಗಳ ಅವಧಿಯಲ್ಲಿ ದರ ಏರಿಕೆಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿದಿದ್ದ ಸರ್ಕಾರ, ಮೇ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 993 ರೂ ರಷ್ಟು ಹೆಚ್ಚಿಸಿದೆ. ಇದರಿಂದ ಈಗ ಒಂದು ಸಿಲಿಂಡರ್ ಬೆಲೆ 3,071.50 ರೂ.ಕ್ಕೆ ತಲುಪಿದೆ ಎಂದರು. ಕೇವಲ 4 ತಿಂಗಳಲ್ಲಿ, ಮೋದಿ ಸರ್ಕಾರವು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಆರು ಬಾರಿ ಹೆಚ್ಚಿಸಿದೆ, ಇದರಿಂದ ಸಾಮಾನ್ಯ ಜನರ ಮೇಲೆ 1,518ರೂ ರಷ್ಟು ಹೆಚ್ಚುವರಿ ಹೊರೆ ಬಿದ್ದಿದೆ. ಜಾಗತಿಕವಾಗಿ ಸಮಸ್ಯೆ ಬಂದಾಗ ದೇಶದ ಜನರನ್ನ ರಕ್ಷಿಸುವ ಬದಲು, ಮೋದಿ ದೇಶದ ಜನರ ಮೇಲೆ ಹೊರೆ ಹಾಕುತ್ತಿದ್ದಾರೆ ಎಂದು ಸಿಎಂ ಹರಿಹಾಯ್ದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು